ಮಂಗಳೂರಿನ ಏಕೈಕ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಕಲಶಾಭಿಷೇಕ
ಸುದ್ದಿಗೋಷ್ಠಿಯಲ್ಲಿ ಅಯ್ಯಪ್ಪ ಭಕ್ತ ಸಮಿತಿಯ ಅಧ್ಯಕ್ಷ ಸೂರಜ್ ರಾಘವನ್, ಬ್ರಹ್ಮಕಲಶ ಸಮಿತಿಯ ಕಾರ್ಯಾಧ್ಯಕ್ಷರಾದ ಮುರಳೀಧರ್, ಗೋಕುಲ್ ದಾಸ್, ಗೌರವ ಕಾರ್ಯದರ್ಶಿ ಜನಾರ್ದನ ಅತ್ತಾವರ, ಉಪಾಧ್ಯಕ್ಷೆ ಮಾಲತಿ ಶೆಟ್ಟಿ ಮಾಣೂರು, ಸ್ವಾಗತ ಸಮಿತಿಯ ಅಧ್ಯಕ್ಷ ರಾಜರತ್ನ ಸನಿಲ್, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಕ್ಷಿತಿ ಮಮ್ಲೂರು, ಸೂರ್ಯಕಾಂತ್ ಉಪಸ್ಥಿತರಿದ್ದರು.
Published on:
Copied
Follow Us
ಮಂಗಳೂರು: ನಗರದ ಅತ್ತಾವರದ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಎ.19ರಿಂದ 23ರವರೆಗೆ ಶ್ರೀ ಅಯ್ಯಪ್ಪ ಸ್ವಾಮಿ ಹಾಗೂ ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣ್ಯ, ಶ್ರೀ ದುರ್ಗಾದೇವಿಯರಿಗೆ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಜರಗಲಿದೆ.
ಎ.19ರಂದು ಮಂಗಳಾದೇವಿ ದೇವಸ್ಥಾನದಿಂದ ಹೊರೆ ಕಾಣಿಕೆ ಮೆರವಣಿಗೆ ನಡೆಯಲಿದೆ. ಎ.23ರಂದು ಬೆಳಗ್ಗೆ 7.30ಕ್ಕೆ ನೂತನವಾಗಿ ನಿರ್ಮಿಸಲಾಗಿರುವ ಗರ್ಭಗೃಹದಲ್ಲಿ ಪಂದಳ ರಾಜ ವಂಶಸ್ಥರಾದ ನಾರಾಯಣ ವರ್ಮ ತಂಬೂರನ್ ತಿರುವನಂತಪುರಂ ಅವರ ಉಪಸ್ಥಿತಿಯಲ್ಲಿ ವೇ. ಮೂ. ಕುಡುಪು ಕೃಷ್ಣರಾಜ ತಂತ್ರಿಗಳ ನೇತೃತ್ವದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯಲಿದೆ ಎಂದು ಅಯ್ಯಪ್ಪ ಭಕ್ತ ಸಮಿತಿಯ ಅಧ್ಯಕ್ಷ ಸೂರಜ್ ರಾಘವನ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿದಿನ ಭಜನಾ ಸಂಕೀರ್ತನೆ ನಡೆಯಲಿದೆ. ಎ.20ರಂದು ಸಂಜೆ 7ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಎ.23ರಂದು ಅಯ್ಯಪ್ಪ ಸ್ವಾಮಿಗೆ ಬ್ರಹ್ಮಕಲಶ ನೆರವೇರಿದ ಬಳಿಕ ಧಾರ್ಮಿಕ ಕವಿ ಕಾವ್ಯ ಗಾಯನ ಸಂಗೀತ ಕವಿಗೋಷ್ಠಿ ನಡೆಯಲಿದೆ. ಪ್ರತಿದಿನ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮಗಳಲ್ಲಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬ್ರಹ್ಮಕಲಶ ಸಮಿತಿಯ ಕಾರ್ಯಾಧ್ಯಕ್ಷರಾದ ಮುರಳೀಧರ್, ಗೋಕುಲ್ ದಾಸ್, ಗೌರವ ಕಾರ್ಯದರ್ಶಿ ಜನಾರ್ದನ ಅತ್ತಾವರ, ಉಪಾಧ್ಯಕ್ಷೆ ಮಾಲತಿ ಶೆಟ್ಟಿ ಮಾಣೂರು, ಸ್ವಾಗತ ಸಮಿತಿಯ ಅಧ್ಯಕ್ಷ ರಾಜರತ್ನ ಸನಿಲ್, ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಕ್ಷಿತಿ ಮಮ್ಲೂರು, ಸೂರ್ಯಕಾಂತ್ ಉಪಸ್ಥಿತರಿದ್ದರು.