ಬೈಕ್‌ಗೆ ಬುಲೆಟ್ ಟ್ಯಾಂಕರ್ ಡಿಕ್ಕಿ

ಸವಾರ ಪವಾಡ ಸದೃಶ ಪಾರು
ಬೈಕ್‌ಗೆ ಬುಲೆಟ್ ಟ್ಯಾಂಕರ್ ಡಿಕ್ಕಿ
ಬೈಕ್‌ಗೆ ಬುಲೆಟ್ ಟ್ಯಾಂಕರ್ ಡಿಕ್ಕಿ
Published on: 

ಮೂಲ್ಕಿ: ಬಸ್ ನಿಲ್ದಾಣ ಜಂಕ್ಷನ್ ಬಳಿ ಬೈಕ್‌ಗೆ ಬುಲೆಟ್ ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ಸವಾರ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾನೆ. ಹೆಜಮಾಡಿ ಟೋಲ್ ಬಳಿಯ ನಿವಾಸಿ ಧನುಷ್(35) ಗಾಯಾಳು. ಅವರು ಬೈಕ್‌ನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದಾಗ ಮೂಲ್ಕಿ ಬಳಿ ಹಿಂದಿನಿಂದ ಬಂದ ಬುಲೆಟ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಬೈಕ್‌ಗೆ ಹಾನಿಯಾಗಿದ್ದು, ಸವಾರ ರಸ್ತೆಗೆ ಎಸೆಯಲ್ಪಟ್ಟು ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net