ಸದ್ರಿ ಪ್ರಕರಣದ ತನಿಖೆಯನ್ನು ಸಂಚಾರ ಪಶ್ಚಿಮ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಯಾನಂದ ಹಾಗೂ ಕೃಷ್ಣಾನಂದ ಜಿ. ನಾಯಕ ಅವರು ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಗೀತಾ ರೈ ಸಾಕ್ಷಿ ವಿಚಾರಣೆ ನಡೆಸಿದ್ದು, ಬಳಿಕ ಸರ್ಕಾರಿ ಅಭಿಯೋಜಕರಾದ ಅರೋನ್ ಡಿಸೋಜ ವಿಟ್ಲ ಸಾಕ್ಷಿ ವಿಚಾರಣೆ ನಡೆಸಿ ವಾದ ಮಂಡಿಸಿದ್ದರು.