

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಪ್ರತಿಯೊಂದು ದೊಡ್ಡ ಉದ್ಯಮವೂ ಸಣ್ಣ ಕನಸು, ಪ್ರಯತ್ನ ಹಾಗೂ ಹೊಸ ಆಲೋಚನೆಯಿಂದಲೇ ಆರಂಭವಾಗುತ್ತದೆ. ವಿದ್ಯಾರ್ಥಿಗಳು ಆಲೋಚನೆಗಳನ್ನು ದೃಢಸಂಕಲ್ಪದಿಂದ ಕಾರ್ಯರೂಪಕ್ಕೆ ತಂದು, ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಮುನ್ನಡೆದಾಗ ವಾತ್ರ ಉದ್ಯಮವಾಗಿ ಬೆಳೆಯಲು ಸಾಧ್ಯ ಎಂದು ಉದ್ಯಮಿ ಹಾಗೂ ನಿವೃತ್ತ ಮುಖ್ಯಶಿಕ್ಷಕಿ ಮೋನಿಕಾ ನೀಲೋಫರ್ ಡಿಸೋಜ ಹೇಳಿದರು.
ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‌ನಲ್ಲಿ ಕಾಲೇಜಿನ ಬಿ ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ವ್ಯಾನೇಜ್‌ಮೆಂಟ್ ವಿಭಾಗದ ವತಿಯಿಂದ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ವಿದ್ಯಾರ್ಥಿಗಳ ಪರಿಕಲ್ಪನೆಯಲ್ಲಿ ಆಯೋಜಿಸಿದ್ದ ಉದ್ಯಮಶೀಲತಾ ಬೂಟ್ ಕ್ಯಾಂಪ್ ಹಾಗೂ ವಿದ್ಯಾರ್ಥಿಗಳ ನೂತನ ಸ್ಟಾರ್ಟಪ್‌ಗಳ ಆರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ. ಅಧ್ಯಕ್ಷತೆ ವಹಿಸಿ ವಾತನಾಡಿ, ಎಸ್‌ಡಿಎಂ ಸಂಸ್ಥೆ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ ಮತ್ತು ವ್ಯವಸ್ಥೆಗಳನ್ನು ಕಲ್ಪಿಸುತ್ತಿದ್ದು ಸದುಪಯೋಗಪಡಿಸಿಕೊಳ್ಳಬೇಕು. ಪಾಲಕರ ಪ್ರೋತ್ಸಾಹ, ಉಪನ್ಯಾಸಕರ ವಾರ್ಗದರ್ಶನದಿಂದ ಗುರಿಯತ್ತ ಸಾಗಬೇಕು ಎಂದರು.
ವಿದ್ಯಾರ್ಥಿಗಳು ಆವಿಷ್ಕರಿಸಿದ 5 ಉತ್ಪನ್ನಗಳನ್ನು ಬಿಡುಗಡೆಗೊಳಿಸಲಾಯಿತು. ವಿಭಾಗದ ಮುಖ್ಯಸ್ಥ ಆಶ್ವಿತ್ ಎಚ್.ಆರ್. ವಾರ್ಗದರ್ಶನ ನೀಡಿದ್ದರು.
ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ.ಸೌಮ್ಯಾ ಬಿ.ಪಿ., ಸಹ ಪ್ರಾಧ್ಯಾಪಕರಾದ ಪ್ರವೀಣ ಡಿ., ಡಾ.ಶಶಾಂಕ್ ಬಿ.ಎಸ್., ವಾಧುರಿ ಗೌಡ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಪಿಯುಸಿ, ಸ್ನಾತಕೋತ್ತರ ಹಾಗೂ ಬಿ.ವೋಕ್ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ನಾಗೇಶ್, ವೀಕ್ಷಿತಾ ನಿರೂಪಿಸಿದರು. ಪ್ರಾಧ್ಯಾಪಕ ಪ್ರವೀಣ್ ಡಿ. ವಂದಿಸಿದರು.