

ಮಂಗಳೂರು: ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು, ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಸ್ಪರ್ಧಾಕೂಟದ ಸ್ಪರ್ಶ ಲಭಿಸಿರುವುದು ಶ್ಲಾಘನೀಯ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಭಾನುವಾರ ನಡೆದ ಕುಡ್ಲದ ಪಿಲಿಪರ್ಬ-2026 ಸೀಸನ್ 5 ಉದ್ಘಾಟಿಸಿ, ಅವರು ಮಾತನಾಡಿದರು.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಕಿರಣ್ ಶೆಣೈ, ಚೇತನ್ ಕಾಮತ್, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ, ನರೇಶ್ ಪ್ರಭು, ಸಹಾನ್ ಸೇರಿದಂತೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ನಿಕಟಪೂರ್ವ ಮ.ನ.ಪಾ ಸದಸ್ಯರು ಹಾಗೂ ಅನೇಕ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.
ಒಟ್ಟು 11 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸಾವಿರಾರು ಮಂದಿ ಆಗಮಿಸಿ ಹುಲಿವೇಷ ಸ್ಪರ್ಧೆ ವೀಕ್ಷಿಸಿದರು. ತಡ ರಾತ್ರಿಯ ತನಕ ಸ್ಪರ್ಧೆ ಮುಂದುವರಿಯಿತು.