

ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ ಪ್ರಭಾಕರ ಹೆಗ್ಡೆ ಎಂಬಾತನ ವಿರುದ್ಧ ಕ್ರಮ ಜರುಗಿಸುವಂತೆ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಸೆ.20ರಂದು ಕಾರ್ಕಳದಲ್ಲಿ ಅಪಘಾತಕ್ಕೀಡಾಗಿದ್ದು ರಮಾನಾಥ ರೈ ಹಾಗೂ ಅವರ ಆಪ್ತ ಸಹಾಯಕರು, ಅಂಗ ರಕ್ಷಕರು, ಕಾರಿನ ಚಾಲಕರಿಗೆ ಗಾಯಗಳಾಗಿತ್ತು.
ಕಾರು ಅಪಘಾತದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಈ ಪೋಸ್ಟ್‌ಗೆ ಆರೋಪಿ ಪ್ರಭಾಕರ ಹೆಗ್ಡೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.