ಸಂಚಾರಕ್ಕೆ ಅಡ್ಡಿ ಇಬ್ಬರ ವಿರುದ್ಧ ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಮಂಗಳೂರು: ಕುಂಟಿಕಾನ ಮೇಲ್ಸೇತುವೆ ಬಳಿ ಕಾವೂರಿನಿಂದ ಮಂಗಳೂರು ನಗರಕ್ಕೆ ಬರುವ ರಸ್ತೆಯಲ್ಲಿ ವಾಹನವನ್ನು ಅಡ್ಡ ಇಟ್ಟು ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಾಗಿದೆ.
ಕುಂಜತ್ತಬೈಲ್ ನಿವಾಸಿ ತನ್ಸೀರ್ (25) ಮತ್ತು ಗದಗ ಜಿಲ್ಲೆ ನರಗುಂದ ತಂಡಾಪುರ ಓಣಿಲೆ ಚಂದ್ರ ಶೇಖರ್ (55) ವಿರುದ್ಧ ಪ್ರಕರಣ ದಾಖಲಾಗಿದೆ. ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ ವಿಚಾರದಲ್ಲಿ ಈ ಇಬ್ಬರ ನಡುವೆ ಗಲಾಟೆಯಾಗಿದೆ. ಪರಿಣಾಮ ಇಬ್ಬರೂ ರಸ್ತೆಗೆ ತಮ್ಮವಾಹನಗಳನ್ನು ಅಡ್ಡಲಾಗಿ ಇರಿಸಿ, ಪರಸ್ಪರ ಬೈದಾಡುತ್ತಾ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಮಾಡಿದ್ದಾರೆ. ಸ್ಥಳಕ್ಕೆ ಹೊಯ್ಸಳ ಪೊಲೀಸರು ಆಗಮಿಸಿ ಅವರನ್ನು ಚದುರಿಸಿದ್ದಾರೆ. ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net