

ಪ್ರಮುಖ ಮುಖ್ಯಾಂಶಗಳು
ಜಿಲ್ಲೆಯ ನಾನಾ ಕಡೆ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಸುರಿಯುವ ಕೃತ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಲ್ಲಿ ಅನಧಿಕೃತ ಕಸಾಯಿಖಾನೆಗಳ ಪಾತ್ರವೂ ಹೆಚ್ಚಿದೆ. ಹೊಳೆಗೆ ತ್ಯಾಜ್ಯ ಸುರಿಯವುದನ್ನು ಶುಚಿತ್ವ ಮಿಷನ್ ಗಂಭೀರವಾಗಿ ಪರಿಗಣಿಸಿದ್ದು, ಈ ನಿಟ್ಟಿನಲ್ಲಿ ವಿಶೇಷ ಸ್ಕಾ ್ವಡ್ ಪ್ರತ್ಯೇಕ ಕಾರ್ಯಾಚರಣೆ ನಡೆಸಲಿದೆ. ಆ ಮೂಲಕ ಜಲಮೂಲಗಳ ಮಾಲಿನ್ಯ ತಡೆದು, ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.