

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಉಜಿರೆಯಂತಹ ಗ್ರಾಮೀಣ ಭಾಗದ ಜನರು ಹೆಚ್ಚಿನ ವೈದ್ಯಕೀಯ ಸೌಲಭ್ಯ ಪಡೆಯಲು ದೂರದ ಮಂಗಳೂರಿಗೆ ಹೋಗಬೇಕಾಗುತ್ತಿತ್ತು. ಡಾ.ಹೆಗ್ಗಡೆಯವರು ಸುಸಜ್ಜಿತ ಆಸ್ಪತ್ರೆ ತೆರೆಯುವ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಉಜಿರೆಯ ಹಿರಿಯ ವೈದ್ಯ ಡಾ.ಕೆ.ನರಸಿಂಹ ಶೆಣೈ ಹೇಳಿದರು.
ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ, ಮಕ್ಕಳ ಆರೋಗ್ಯ ತಪಾಸಣಾ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಮಾತನಾಡಿ, ನಾವು ಮಾಡುವ ಪ್ರತಿಯೊಂದು ಕೆಲಸವು ಜನರಿಗೆ ಪ್ರಯೋಜನವಾಗಬೇಕು ಎಂಬುದು ಹೆಗ್ಗಡೆಯವರ ನಿಲುವು. ಪೂಜ್ಯರು ಮತ್ತು ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಶುಭಾಶೀರ್ವಾದ ಹಾಗೂ ಹರ್ಷೇಂದ್ರಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಈ ದಿನ ಮಕ್ಕಳ ರೋಗ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದರು.
ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಮಕ್ಕಳ ರೋಗತಜ್ಞರಾದ ಡಾ.ಅರ್ಚನಾ ಕೆ.ಎಂ, ಡಾ.ಪ್ರತೀತ್, ಡಾ.ನಿಖಿತಾ ಮಿರ್ಲೆ ಮಕ್ಕಳನ್ನು ಕಾಡುವ ಆರೋಗ್ಯ ಸಮಸ್ಯೆ ಬಗ್ಗೆ ವಿವರಿಸಿದರು. ಮನಃಶಾಸ್ತ್ರ ಸಲಹೆಗಾರೆ ಶ್ಯಾಮಿಲ ಮಾಹಿತಿ ನೀಡಿದರು. ಸ್ಟೋರ್ ಇನ್-ಚಾರ್ಜ್ ಜಗನ್ನಾಥ ಎಂ. ಕಾರ್ಯಕ್ರಮ ನಿರೂಪಿಸಿದರು. ಸಂಧ್ಯಾ ಶೆಣೈ, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಸುಮಂತ್ ರೈ, ಪರ್ಚೇಸ್ ಮ್ಯಾನೇಜರ್ ಅಜಯ್ ಕುಮಾರ್ ಪಿ.ಕೆ, ಸಂಪರ್ಕಾಧಿಕಾರಿ ಚಿದಾನಂದ್ ಸಹಕರಿಸಿದರು.