ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ : ಸ್ಪೀಕರ್ ಯು.ಟಿ.ಖಾದರ್ ಬಣ್ಣನೆ

 ಎಲ್ಯಾರ್‌ಪದವು ಬರುವ ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿ ಕೊಠಡಿ ಉದ್ಘಾಟಿಸಲಾಯಿತು.
ಎಲ್ಯಾರ್‌ಪದವು ಬರುವ ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಗತಿ ಕೊಠಡಿ ಉದ್ಘಾಟಿಸಲಾಯಿತು.
Published on

ಉಳ್ಳಾಲ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿ ಕಲಿಕೆಗೆ ಉತ್ತಮ ವಾತಾವರಣ ಕಲ್ಪಿಸಿದರೆ ಅಂತಹ ಶಾಲೆಗಳಿಗೆ ಊರವರೇ ತಮ್ಮ ಮಕ್ಕಳನ್ನು ದಾಖಲಿಸುತ್ತಾರೆ. ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ವೃದ್ಧಿಯಾದಾಗ ಸರ್ಕಾರದಿಂದ ಮೂಲಸೌಕರ್ಯ ಹರಿದು ಬರುತ್ತದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

ಅಂಬ್ಲಮೊಗರು ಗ್ರಾಮದ ಎಲ್ಯಾರ್‌ಪದವು ಬರುವ ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ ನವೀಕೃತ ಎಲ್‌ಕೆಜಿ, ಯುಕೆಜಿ ಕೊಠಡಿ ಹಾಗೂ ಆಂಗ್ಲಮಾಧ್ಯಮ 1ನೇ ತರಗತಿ ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಸ್ವಾಭಿಮಾನದ ಬದುಕು ಕಟ್ಟಲು ಶಿಕ್ಷಣದಿಂದ ಮಾತ್ರ ಸಾಧ್ಯ. ಪಾಲಕರು ಮಕ್ಕಳ ಶಿಕ್ಷಣದ ಬಗ್ಗೆ ವಿಶೇಷ ಆಸಕ್ತಿ ವಹಿಸಬೇಕು. ಪ್ರತಿ ಮನೆಯ ಸಮಸ್ಯೆ ವಿಭಿನ್ನವಾಗಿದ್ದು ಅದನ್ನು ಬಗೆಹರಿಸಲು ತಮ್ಮ ಮನೆಯ ಮಕ್ಕಳನ್ನು ಸುಶಿಕ್ಷಿತರನ್ನಾಗಿಸುವುದು ಅಗತ್ಯ ಎಂದರು.

ಅಂಬ್ಲಮೊಗರು ಗ್ರಾಪಂ ಅಧ್ಯಕ್ಷ ಇಕ್ಬಾಲ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್, ಶಾಲೆಯ ಮುಖ್ಯಶಿಕ್ಷಕ ಜಗದೀಶ್ ಶೆಟ್ಟಿ, ತಾಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ರಫೀಕ್ ಅಂಬ್ಲಮೊಗರು, ಹರೇಕಳ ಗ್ರಾಪಂ ಮಾಜಿ ಅಧ್ಯಕ್ಷ ಬದ್ರುದ್ದೀನ್, ಕ್ಷೇತ್ರ ಶಿಕ್ಷಣ ಆರೋಗ್ಯಾಧಿಕಾರಿ ಜಯಂತಿ, ಸ್ಥಳೀಯ ಮುಖಂಡರಾದ ಸುದರ್ಶನ್ ಶೆಟ್ಟಿ, ಶಿವಪ್ರಸಾದ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಹಿಮಾನ್ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕಿ ಮೋಹಿನಿ ಸ್ವಾಗತಿಸಿದರು. ಶಿಕ್ಷಕಿ ಸ್ವಪ್ನಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net