ಕೆಎಸ್‌ಆರ್‌ಟಿಸಿ ಬಸ್-ಟಿಪ್ಪರ್ ಲಾರಿ ಡಿಕ್ಕಿ

ಬಸ್ಸು ಹಾಗೂ ಕಾರು ಜಖಂ
 ಜಖಂ ಗೊಂಡಿರುವ ಬಸ್
ಜಖಂ ಗೊಂಡಿರುವ ಬಸ್
Published on: 

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ತಲಪಾಡಿಯಲ್ಲಿ ಟಿಪ್ಪರ್ ಲಾರಿಯೊಂದು ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿಯಾಗಿ ಬಸ್ಸು ಹಾಗೂ ಕಾರು ಜಖಂಗೊಂಡ ಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಬಹ್ಮರಕೂಟ್ಲು ಟೋಲ್‌ಗೇಟ್ ಬಳಿಕ ಏಕಮುಖ ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ವಿರುದ್ಧ ದಿಕ್ಕಿನಿಂದ ಬಂದು ಯುಟರ್ನ್ ಪಡೆಯುತ್ತಿದ್ದ ಟಪ್ಪರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ಸಿನ ಮುಂದಿನ ಬಾಗಿಲು ಜಖಂಗೊಂಡು ತೆರೆಯಲು ಸಾಧ್ಯವಾಗದೆ ಪ್ರಯಾಣಿಕರನ್ನು ಚಾಲಕನ ಬಾಗಿಲಿನ ಮೂಲಕ ಕೆಳಗಿಳಿಸಬೇಕಾಯಿತು. ಬಸ್ಸಿನ ಹಿಂಭಾಗದಲ್ಲಿ ಬರುತ್ತಿದ್ದ ಕಾರು ಬಸ್ಸಿಗೆ ಡಿಕ್ಕಿಯಾಗಿ ಜಖಂಗೊಂಡಿದೆ.

ಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಸ್ ಮಂಗಳೂರಿನಿಂದ ಮೂಡಿಗೆರೆ ವಾರ್ಗವಾಗಿ ಶಿವಮೊಗ್ಗಕ್ಕೆ ಹೊರಟ್ಟಿದ್ದು ದೂರದ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ತೊಂದರೆ ಉಂಟಾಯಿತು. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net