ಬಜಪೆಯಲ್ಲಿ 2025 ರಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆಯ ಅನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಈತನ ವಿರುದ್ದ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಬಿ ಎನ್ ಎಸ್ ಕಲಂ 353 (1), 353(2), 61 (2), 55 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ತನಿಖೆಯ ಸಮಯದಲ್ಲಿ ಘೆ ಅಈಈ್ಗ ಎಂಬ ಖಾತೆಯಿಂದ ಕೋಮು ಪ್ರಚೋದಕ ಪೋಸ್ಟ್ ಗಳನ್ನು ಹಾಕಿದ ವ್ಯಕ್ತಿ ಪವನ್ ಎಂಬುದು ಗೊತ್ತಾಗಿತ್ತು. ಬುಧವಾರದಂದು ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಈತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಮಾಡಿದ ಬಗ್ಗೆ ಕಾಪು ಪೊಲೀಸ್ ಠಾಣೆಯಯೂ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.