ಬಂಟ್ವಾಳ ತಾಲೂಕಿನ ಎರಡು ಪ್ರಮುಖ ಧಾರ್ಮಿಕ ಕ್ಷೇತ್ರಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ನೇತ್ರಾವತಿ ನದಿಗೆ ನಿರ್ಮಾಣ ಹಂತದಲ್ಲಿ ನನೆಗುದಿಗೆ ಬಿದ್ದಿರುವ ಸೌಹಾರ್ದ ಸೇತುವೆ ಕಾಮಗಾರಿ ಮುಂದಿನ ಮಾರ್ಚ್ ತಿಂಗಳಲ್ಲಿ ಮುಗಿಸಿಕೊಡುವ ವಾಗ್ದಾನವನ್ನು ಅಧಿಕಾರಿಗಳು ನೀಡಿದ್ದಾರೆ. ಈ ಮೂಲಕ ಗ್ರಾಮಸ್ಥರಲ್ಲಿ ಸೇತುವೆ ಕನಸು ಮತ್ತೆ ಚಿಗುರೊಡೆದಿದೆ.