ಅವಧಿ ಮುಗಿದರೂ ನಿರಂತರ ಜನ ಸೇವೆ

 ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಕಡಬ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ಕಾಣಿಯೂರು ಗ್ರಾಪಂ ಅಧ್ಯಕ್ಷ ವಿಶ್ವನಾಥ ಕೊಪ್ಪ ಮೊದಲಾದವರಿದ್ದರು.
ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಕಡಬ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ಕಾಣಿಯೂರು ಗ್ರಾಪಂ ಅಧ್ಯಕ್ಷ ವಿಶ್ವನಾಥ ಕೊಪ್ಪ ಮೊದಲಾದವರಿದ್ದರು.
Published on
ಕಡಬ: ಪಂಚಾಯಿತಿಯ ಎಲ್ಲ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ತಮ್ಮ ಆಡಳಿತ ಅವಧಿ ಮುಗಿದರೂ ನಿರಂತರವಾಗಿ ಜನರ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಜಿಪಂ, ಕಡಬ ತಾಪಂ, ಕಾಣಿಯೂರು ಗ್ರಾಪಂ ವತಿಯಿಂದ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಅಬ್ಬಡದಲ್ಲಿ ನಿರ್ಮಾಣಗೊಂಡಿರುವ ಘನ ತ್ಯಾಜ್ಯ ನಿರ್ವಹಣೆ ಘಟಕ ಸ್ವಚ್ಛ ಸಂಕೀರ್ಣ ಹಾಗೂ ಹಿಂದೂ ರುದ್ರಭೂಮಿ ಉದ್ಘಾಟಿಸಿ ಮಾತನಾಡಿದರು.
ಕಡಬ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಮಾತನಾಡಿದರು. ಕಾಣಿಯೂರು ಗ್ರಾಪಂ ಅಧ್ಯಕ್ಷ ವಿಶ್ವನಾಥ ಕೊಪ್ಪ ಅಧ್ಯಕ್ಷತೆ ವಹಿಸಿದ್ದರು. ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ಕಡಬ ಎನ್‌ಆರ್‌ಎಲ್‌ಎಂ ತಾಲೂಕು ಸಂಯೋಜಕ ಜಗತ್ ಚಾರ್ವಾಕ, ಕಾಣಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಘು ಎನ್.ಬಿ, ಸಂಜೀವಿನಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಚಂದ್ರಾವತಿ ರೈ ಮಾಳ ಉಪಸ್ಥಿತರಿದ್ದರು. ಸದಸ್ಯ ರಾಮಣ್ಣ ಗೌಡ ಮುಗರಂಜ ಸ್ವಾಗತಿಸಿದರು. ವಿನುತಾ ರೈ ವಂದಿಸಿದರು. ಧನ್ಯಾ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net