

ಮೂಲ್ಕಿ: ಅವಿಭಜಿತ ದ.ಕ.ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಉತ್ತುಂಗಕ್ಕೇರಲು ಜನಪರ ಕಾಳಜಿ ಇರುವ ಸಹಕಾರಿಗಳಿಂದ ಸಾಧ್ಯವಾಗಿದೆ ಎಂದು ಮೂಲ್ಕಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ(ಕ್ಷೀರ ಸಾಗರ) ಅಧ್ಯಕ್ಷ ಗೋಪಿನಾಥ ಪಡಂಗ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಿಶಿಷ್ಟ ಸಾಧನ ಪ್ರಶಸ್ತಿಯನ್ನು ಸತತ ಎರಡು ಬಾರಿಗೆ ಪಡೆದ ಹಳೆಯಂಗಡಿ ಪ್ರಿಯದಶಿನಿ ಕೋ-ಆಪರೇಟಿವ್ ಸೊಸೈಟಿ ಆಶ್ರಯದಲ್ಲಿ ಸಹಕಾರ ಸಪ್ತಾಹ 2025ರ ಪೂರಕವಾಗಿ ಒಂದು ವಾರದ ಕಾರ್ಯಕ್ರಮದ ಪ್ರಥಮ ಹಂತವಾಗಿ ಶುಕ್ರವಾರ ಹಳೆಯಂಗಡಿ ಪ್ರಧಾನ ಕಚೇರಿಯಲ್ಲಿ ಸಹಕಾರ ಸಪ್ತಾಹ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಹಕಾರಿ, ಪಿಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಾದವ ತಿಂಗಳಾಯ, ಹಳೆಯಂಗಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಸ್ಥಾಪಕ ಅಧ್ಯಕ್ಷರಾದ ಶೆರ್ಲಿ ಬಂಗೇರ, ದ.ಕ.ಜಿಲಾ ್ಲರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜೈಕೃಷ್ಣ ಕೋಟ್ಯಾನ್ ಅವರನ್ನು ಗೌರವಿಸಲಾಯಿತು.
ಹಿರಿಯ ನಿರ್ದೇಶಕ ಉಮಾನಾಥ್ ಜೆ.ಶೆಟ್ಟಿಗಾರ್, ಹಳೆಯಂಗಡಿ ಗ್ರಾಪಂ ಸದಸ್ಯ ಅಬ್ದುಲ್ ಅಝೀಝ್, ಅಬ್ದುಲ್‌ಖಾದರ್, ಶಶಿಕಲಾ ಕರಿತೋಟ, ಪಿಸಿಎ ಬ್ಯಾಂಕ್ ನಿರ್ದೇಶಕ ಧರ್ಮಾನಂದ ಶೆಟ್ಟಿಗಾರ್ ಇದ್ದರು.
ಸ್ವಸಹಾಯ ಗುಂಪಿನ ಪ್ರೇರಕಿ ನಿರಂಜಲ ಪ್ರಾರ್ಥಿಸಿದರು. ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು. ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ ನಿರೂಪಿಸಿದರು. ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು.