ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜನಸಾಗರ

ಶನಿವಾರ, ಭಾನುವಾರ ಹಾಗೂ ಸೋಮವಾರ ಸರಣಿ ರಜೆ ಹಿನ್ನೆಲೆ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಅಧಿಕ ಸಂಖ್ಯೆಯಲ್ಲಿದ್ದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಅಧಿಕ ಸಂಖ್ಯೆಯಲ್ಲಿದ್ದರು.
Published on: 

ಸುಬ್ರಹ್ಮಣ್ಯ(ದ.ಕ.): ಶನಿವಾರ, ಭಾನುವಾರ ಹಾಗೂ ಸೋಮವಾರ ಸರಣಿ ರಜೆ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಾನುವಾರ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.

ಶನಿವಾರ ಸಂಜೆಯಿಂದಲೇ ತಂಡೋಪತಂಡವಾಗಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿದ್ದರು. ಭಾನುವಾರ ಬೆಳಗ್ಗೆಯಿಂದ ಕುವಾರಧಾರಾ ನದಿಯಲ್ಲಿ ತೀರ್ಥಸ್ನಾನ ವಾಡಿ, ಸರತಿ ಸಾಲಿನಲ್ಲಿ ನಿಂತು ವಿವಿಧ ಸೇವೆಗಳನ್ನು ನೆರವೇರಿಸಿ ದೇವರ ದರ್ಶನ ಪಡೆದರು.

ಆಶ್ಲೇಷಬಲಿ, ನಾಗಪ್ರತಿಷ್ಠೆ, ಶೇಷಸೇವೆ, ಕಾರ್ತಿಕ ಪೂಜೆ, ತುಲಾಭಾರ ಹಾಗೂ ಮಹಾಭಿಷೇಕ ಸೇವೆಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆದವು. ದೇವಳದ ಪಾರ್ಕಿಂಗ್ ಸ್ಥಳಗಳು ವಾಹನಗಳಿಂದ ತುಂಬಿದ್ದವು. ದೇವಳದ ವಸತಿಗೃಹಗಳು ಹಾಗೂ ಖಾಸಗಿ ವಸತಿಗೃಹಗಳೂ ಭರ್ತಿಯಾಗಿದ್ದವು. ಷಣ್ಮುಖ ಪ್ರಸಾದ ಭೋಜನಶಾಲೆ, ಭಕ್ತರ ಬಿಡಾರ ಹಾಗೂ ಶೃಂಗೇರಿ ಮಠದಲ್ಲಿ ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net