ಧರ್ಮಸ್ಥಳ ಯೋಜನೆಯಿಂದ ಸಮಾಜಮುಖಿ ಕಾರ್ಯ : ಬಾಬು ನಾಯ್ಕ ಎ.

  ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಪ್ರಮುಖರಿಗೆ ಸಹಾಯಧನದ ಡಿಡಿ ವಿತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಎ., ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ತಾಲೂಕು ಅಧ್ಯಕ್ಷ ಮಹೇಶ್ ಕೆ.ಸವಣೂರು ಮೊದಲಾದವರಿದ್ದರು.

Published on

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜತೆಗೆ ಧಾರ್ಮಿಕ ಶ್ರದ್ಧಾ ಕೇಂದ್ರಗಳಾಗಿರುವ ದೇವಸ್ಥಾನ, ದೈವಸ್ಥಾನಗಳಿಗೆ ಹಲವಾರು ವರ್ಷಗಳಿಂದ ಕ್ಷೇತ್ರ ಸಹಾಯಧನ ನೀಡುತ್ತಾ ಬಂದಿದೆ. ಕ್ಷೇತ್ರದ ಸಹಾಯಧನದಿಂದ ಅದೆಷ್ಟೊ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಜೀರ್ಣೋದ್ಧಾರಗೊಂಡಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಎ. ಹೇಳಿದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಕಾರ್ಯಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 3,00,000 ರೂ. ಸಹಾಯಧನದ ಡಿಡಿಯನ್ನು ವಿತರಿಸಿ ಮಾತನಾಡಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ.ಸವಣೂರು, ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜತ್ತಪ್ಪ ರೈ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಗಣೇಶ್ ನಿಡ್ಡಣ್ಣಾಯ, ಕೋಶಾಧಿಕಾರಿ ಕೃಷ್ಣ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಐತ್ತಪ್ಪ ಗೌಡ, ವಿಠಲ ಗೌಡ, ತನಿಯಪ್ಪ ನಾಯ್ಕ ಕಾರ್ಲಾಡಿ, ಪುಷ್ಪಲತಾ ದರ್ಖಾಸು ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net