ಬಸ್ ನಿಲ್ದಾಣದಲ್ಲಿ ಮೃತದೇಹ ಪತ್ತೆ

ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲು
New Project (40)
ಮೃತದೇಹ
Published on

ಕಾಸರಗೋಡು: ಎಣ್ಮಕಜೆ ಪಂಚಾಯಿತಿ ಬಾಳೆಮೂಲೆ ನಿವಾಸಿ ದಿ.ರಾಮ ನಾಯ್ಕ ಎಂಬುವರ ಪುತ್ರ ದಯಾನಂದ(45) ಅವರ ಮೃತದೇಹ ಬಾಳೆಮೂಲೆಯ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ.

ಜನಸಂಚಾರ ಕಡಿಮೆಯಿರುವ ಪ್ರದೇಶದಲ್ಲಿರುವ ಖಾಸಗಿ ಬಸ್ ನಿಲ್ದಾಣದ ಕಟ್ಟಡದೊಳಗೆ ಮಂಗಳವಾರ ರಾತ್ರಿ ದಯಾನಂದ ಅವರ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅವರು ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಬದಿಯಡ್ಕ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net