

ವಿಜಯವಾಣಿ ಸುದಿಜಾಲ ಸುಬ್ರಹ್ಮಣ್ಯ
ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ ಬಿ ಅಧ್ಯಕ್ಷ, ರಾಜ್ಯ ಒಕ್ಕಲಿಗರ ಸಂಘ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಮತ್ತು ಮನೆಯವರು ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಸೇವಾ ರೂಪದಲ್ಲಿ ಬೆಳ್ಳಿರಥ ಸಮರ್ಪಣೆ ಮಾಡಿದರು.
ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರು ವೈದಿಕ ವಿಧಿವಿಧಾನ ನೆರವೇರಿಸಿದರು. ಸೋಮವಾರ ಬೆಳಗ್ಗೆ ಸುಬ್ರಹ್ಮಣ್ಯ ಹೋಮ, ಪವಮಾನ ಹೋಮ, ರಥಕ್ಕೆ ಕಲಶಾಭಿಷೇಕ ಮಾಡಲಾಯಿತು. ನಂತರ ಶಿಖರ ಪ್ರತಿಷ್ಠಾಪನೆ ನಡೆದು ರಥಕ್ಕೆ ಪೂಜೆ ಸಮರ್ಪಿಸಲಾಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸೇವಾರ್ಥಿಯಾದ ಡಾ.ರೇಣುಕಾ ಪ್ರಸಾದ್ ಮತ್ತು ಮನೆಯವರಿಗೆ ರಶೀದಿ, ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.
ಸೇವಾರ್ಥಿ ಡಾ.ರೇಣುಕಾಪ್ರಸಾದ್ ಕೆ.ವಿ. ಅವರ ಮನೆಯವರಾದ ಡಾ.ಜ್ಯೋತಿ ಆರ್.ಪ್ರಸಾದ್, ಮೌರ್ಯ ಆರ್.ಪ್ರಸಾದ್, ಡಾ.ಅಭಿಜ್ಞಾ ಗೋಕುಲ್, ಗೋಕುಲ್, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿನಯ್ ಗುರೂಜಿ, ವಿಧಾನಸಭೆ ಮಾಜಿ ಸಭಾಪತಿ ಕೆ.ಜಿ.ಬೋಪಯ್ಯ, ಮಾಜಿ ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬೆಳಗಾವಿ ವಿಟಿಯು ರಿಜಿಸ್ಟ್ರಾರ್ ಉಜ್ವಲ್ ಯು.ಜೆ., ರಥ ಶಿಲ್ಪಿ ರಾಜಗೋಪಾಲಾಚಾರ್ಯ, ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಎಇಒ ಯೇಸುರಾಜ್, ಪ್ರಮುಖರಾದ ಅಜಿತ್ ಶೆಟ್ಟಿ ಕಡಬ, ನಿತ್ಯಾನಂದ ಮುಂಡೋಡಿ, ಎನ್.ಎ.ರಾಮಚಂದ್ರ, ಎಸ್.ಎನ್.ಮನ್ಮಥ, ಜಾಕೆ ಮಾಧವ ಗೌಡ, ಪಿ.ಎಸ್.ಗಂಗಾಧರ, ಪಿ.ಸಿ.ಜಯರಾಮ, ಚಂದ್ರಹಾಸ ರೈ, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಡಾ.ರಘು, ಲೀಲಾಮನಮೋಹನ್, ಪ್ರವೀಣ ರೈ ಮರುವಂಜ, ಸೌಮ್ಯಾ ಭರತ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಸತೀಶ್ ಕೂಜುಗೋಡು, ಪವನ್ ಎಂ.ಡಿ., ಅಚ್ಯುತ್ತ ಗೌಡ ಬಳ್ಪ ಮತ್ತಿತರರು ಉಪಸ್ಥಿತರಿದ್ದರು.