ಕಡಬ: ಕುಲಾಲ ಬಾಂಧವರು ಒಗ್ಗಟ್ಟಿನಿಂದ ಶ್ರಮಿಸಿ, ಪರಸ್ಪರ ಸಹಕಾರ ಹಾಗೂ ಸಹಭಾವನೆಯೊಂದಿಗೆ ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು. ಸಂಘವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಉನ್ನತಮಟ್ಟಕ್ಕೆ ಕೊಂಡೊಯ್ಯಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ರಾಮಕುಂಜ ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ಹರೀಶ್ ಹೊಸಮಣ್ಣು ಹೇಳಿದರು.
ರಾಮಕುಂಜ ಕುಲಾಲ ಸಮಾಜ ಸೇವಾ ಸಂಘ ವತಿಯಿಂದ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಬಳಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಹಿತಿ ವಿಶ್ವನಾಥ ಕುಲಾಲ್ ಮಿತ್ತೂರು ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ವಾಳ ಮೂಡ ಸರ್ಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕ ದಾಮೋದರ ಇ., ಪುತ್ತೂರು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ.ಶೇಷಪ್ಪ ಕುಲಾಲ್, ಪುತ್ತೂರು ತಾಲೂಕು ಭೂಮಾಪಕ ಮೋಹನ್ ಕೆ. ಮಾತನಾಡಿದರು.
ರಾಮಕುಂಜ ಕುಲಾಲ ಸಮಾಜ ಸೇವಾ ಸಂಘದ ಕಾರ್ಯದರ್ಶಿ ಚಂದ್ರಶೇಖರ ಕುಂಡಡ್ಕ, ಆಶಾ ಕಾರ್ಯಕರ್ತೆ ಪ್ರೇಮಲತಾ ಉಪಸ್ಥಿತರಿದ್ದರು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.