ಧ್ಯಾನದಿಂದ ಸಾಕಷ್ಟು ಪ್ರಯೋಜನಗಳಿವೆ. ಮನಸ್ಸಿನ ಗೊಂದಲ ಪರಿಹಾರವಾಗಿ ಶಾಂತಿ, ನೆಮ್ಮದಿ ದೊರೆಯುತ್ತದೆ. ಮನಸ್ಸಿನಲ್ಲಿ ಬರುವ ಋಣಾತ್ಮಕ ಚಿಂತನೆ ದೂರ ಮಾಡಿ ಧನಾತ್ಮಕ ಚಿಂತನೆಯಲ್ಲಿ ಮಗ್ನವಾಗಲು ಧ್ಯಾನ ಉತ್ತಮ ಮಾರ್ಗ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.