ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ "ಮಂಗಳೂರು-ಮಸ್ಕತ್ ನೇರ ವಿಮಾನಯಾನ ಸೇವೆಯು ಅಚಾನಕ್ ಆಗಿ ಸ್ಥಗಿತಗೊಂಡ ಕಾರಣ ಮಸ್ಕತ್‌ನಲ್ಲಿ ನೆಲೆಸಿರುವ ನಮ್ಮ ಕರಾವಳಿ ಭಾಗದ ಸಾವಿರಾರು ಪ್ರಯಾಣಿಕರಿಗೆ ತೀವ್ರ ಸಂಕಷ್ಟ ಎದುರಾಗಿತ್ತು. ಮಸ್ಕತ್‌ನಿಂದ ಮಂಗಳೂರಿಗೆ ಬರಬೇಕಾದವರು ದೆಹಲಿ, ಮುಂಬೈ ಅಥವಾ ಕಣ್ಣೂರು ಮೂಲಕ ಸುತ್ತಿ ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇತ್ತು. ಈ ಗಂಭೀರ ಸಮಸ್ಯೆಯನ್ನು ಮನಗಂಡು ನಾವು ನಡೆಸಿದ ನಿರಂತರ ಪ್ರಯತ್ನ ಹಾಗೂ ಮನವಿಗೆ ಸ್ಪಂದಿಸಿ, ಮಾರ್ಚ್ 1 ರಿಂದ ಈ ಸೇವೆಯನ್ನು ಪುನರಾರಂಭಿಸಲು ಕ್ರಮ ಕೈಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರಿಗೆ ಸಮಸ್ತ ಅನಿವಾಸಿ ಕರಾವಳಿಗರ ಪರವಾಗಿ ನಾನು ಹೃತ್ಪೂರ್ವಕ ಧನ್ಯವಾದ ಅರ್ಪಿಸುತ್ತೇನೆ. ಈ ನೇರ ವಿಮಾನ ಸೇವೆಯು ನಮ್ಮ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಿದೆ" ಎಂದು ಹೇಳಿದ್ದಾರೆ.