ಸ್ಕೌಟ್ಸ್-ಗೈಡ್ಸ್‌ನಿಂದ ಸಂಸ್ಕಾರಯುಕ್ತ ಶಿಕ್ಷಣ : ಡಾ.ಎಂ.ಮೋಹನ್ ಆಳ್ವ

ಪಿಲಿಕುಳದಲ್ಲಿ ಜಿಲ್ಲಾ ಕ್ಯಾಂಪೋರಿ ಉದ್ಘಾಟನಾ ಸಮಾರಂಭದಲ್ಲಿ ಡಾ.ಎಂ.ಮೋಹನ್ ಆಳ್ವ ಮಾತನಾಡಿದರು.
ಪಿಲಿಕುಳದಲ್ಲಿ ಜಿಲ್ಲಾ ಕ್ಯಾಂಪೋರಿ ಉದ್ಘಾಟನಾ ಸಮಾರಂಭದಲ್ಲಿ ಡಾ.ಎಂ.ಮೋಹನ್ ಆಳ್ವ ಮಾತನಾಡಿದರು.
Published on
ರೋವರ್ಸ್‌-ರೇಂಜರ್ಸ್‌ ಸಮಾಗಮ, ಸ್ಕೌಟ್ಸ್-ಗೈಡ್ಸ್ ಮೇಳ ಉದ್ಘಾಟಿಸಿದ ದ.ಕ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಡಾ.ಎಂ.ಮೋಹನ ಆಳ್ವ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣದ ಹೊರತಾದ ಜೀವನ ಶಿಕ್ಷಣದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ. ಇಲ್ಲಿ ಕಲಿಯುವ ಶಿಸ್ತು, ಸಂಸ್ಕಾರ-ಸಂಸ್ಕೃತಿ, ದೇಶಪ್ರೇಮ, ಪರಿಸರ, ಸಮಯ ಪ್ರಜ್ಞೆಯಂತಹ ಮಹತ್ವದ ವಿಷಯಗಳು ನಿಮ್ಮ ಜೀವನಕ್ಕೆ ಮಾರ್ಗದರ್ಶಿಯಾಗಲಿವೆ ಎಂದರು.
ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಈಶ್ವರ್ ಮಾತನಾಡಿ, ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಾಯಕತ್ವ ಗುಣ ಬೆಳೆಸಿಕೊಳ್ಳಲು ಈ ಶಿಬಿರ ಉಪಯುಕ್ತ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net