

ಮೂಲ್ಕಿ: ಕ್ರೀಡೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸಕ್ಕೆ ಉತ್ತಮ ವೇದಿಕೆ. ಶಿಕ್ಷಣದ ಜತೆಯಾಗಿ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಅಭಿವೃದ್ಧಿ ಸಾಧ್ಯ ಎಂದು ಸುರತ್ಕಲ್ ಶ್ರೀಗುರು ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಸೀತಾರಾಮ್ ಎಚ್. ಹೇಳಿದರು.
ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ದ.ಕ. ಜಿಲ್ಲೆ ಮಂಗಳೂರು ಮತ್ತು ನಾರಾಯಣ ಗುರು ಸಂಯುಕ್ತ ಪದವಿ ಪೂರ್ವ ಕಾಲೇಜು ಮೂಲ್ಕಿ ಆಶ್ರಯದಲ್ಲಿ ಜಿಲ್ಲಾಮಟ್ಟದ ಟೆನಿಕ್ವಾಯಿಟ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಪದವಿಪೂರ್ವ ಉಪನಿರ್ದೇಶಕಿ ರಾಜೇಶ್ವರಿ ಎಚ್.ಎಚ್.ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕ ಹರೀಂದ್ರ ಸುವರ್ಣ, ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮಾನಾಥ್ ಶೆಟ್ಟಿ, ತಾಲೂಕು ಕ್ರೀಡಾ ಸಂಯೋಜಕ ನಂದನ್, ಶಾಲಾ ಕಾರ್ಯದರ್ಶಿ ಬಾಲಚಂದ್ರ ಸನಿಲ್, ಪ್ರಾಂಶುಪಾಲ ಯತೀಶ್ ಅಮೀನ್, ಆಡಳಿತಾಧಿಕಾರಿ ಮಂಜುಳಾ ಕೆ.ವಿ., ಮುಖ್ಯಶಿಕ್ಷಕಿ ಗೀತಾ ಶೆಟ್ಟಿ, ಟ್ರಸ್ಟಿ ಯೋಗೀಶ್ ಕೋಟ್ಯಾನ್ ಉಪಸ್ಥಿತರಿದ್ದರು. ಅಕ್ಷತಾ ಕಾರ್ಯಕ್ರಮ ನಿರ್ವಹಿಸಿದರು. ಹರ್ಷಿತ ಸ್ವಾಗತಿಸಿದರು. ಸಚಿನ್ ವಂದಿಸಿದರು.