ದ.ಕ. ಜಿಲ್ಲೆಯ ಪತ್ರಕರ್ತರ ಕನ್ನಡ ಭಾಷಾ ಪ್ರಯೋಗ ಅಧ್ಬುತ

ಪತ್ರಕರ್ತ ಸಂಶುದ್ದೀನ್ ಎಣ್ಮೂರು ಅವರಿಗೆ ಪ.ಗೋ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರೊ.ಪಿ.ಎಲ್.ಧರ್ಮ, ಚಿದಂಬರ ಬೈಕಂಪಾಡಿ, ಪುಷ್ಪರಾಜ್ ಬಿ.ಎನ್., ಪಿ.ಬಿ.ಹರೀಶ್ ರೈ ಮೊದಲಾದವರಿದ್ದರು.
ಪತ್ರಕರ್ತ ಸಂಶುದ್ದೀನ್ ಎಣ್ಮೂರು ಅವರಿಗೆ ಪ.ಗೋ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರೊ.ಪಿ.ಎಲ್.ಧರ್ಮ, ಚಿದಂಬರ ಬೈಕಂಪಾಡಿ, ಪುಷ್ಪರಾಜ್ ಬಿ.ಎನ್., ಪಿ.ಬಿ.ಹರೀಶ್ ರೈ ಮೊದಲಾದವರಿದ್ದರು.
Published on

ಮಂಗಳೂರು : ದ.ಕ. ಜಿಲ್ಲೆಯ ಪತ್ರಕರ್ತರ ಕನ್ನಡ ಭಾಷಾ ಬಳಕೆ ಅದ್ಭುತವಾಗಿದ್ದು, ಕನ್ನಡ ಭಾಷೆಯನ್ನು ಬೆಳೆಸುವ ಚಳವಳಿಯ ಭಾಗವಾಗಿಯೂ ಇಲ್ಲಿನ ಪತ್ರಕರ್ತರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್. ಧರ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ದ.ಕ. ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್‌ಕ್ಲಬ್, ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ‘ವಾರ್ತಾಭಾರತಿ’ ಪತ್ರಿಕೆಯ ಹಿರಿಯ ಉಪ ಸಂಪಾದಕ ಸಂಶುದ್ದೀನ್ ಎಣ್ಮೂರು ಅವರಿಗೆ ಪ.ಗೋ. ಪ್ರಶಸ್ತಿ ಪ್ರದಾನಗೈದು ಅವರು ಮಾತನಾಡಿದರು.
ಪ್ರಶಸ್ತಿಗೆ ಆಯ್ಕೆಯಾಗಿರುವ ಸಂಶುದ್ದೀನ್ ಅವರ ವಿಶೇಷ ವರದಿಯಲ್ಲೂ ಅವರು ಬಳಸಿರುವ ಭಾಷೆ, ಸರ್ಕಾರವನ್ನು ಎಚ್ಚರಿಸುವ ಧಾಟಿ ಅತ್ಯುತ್ತಮವಾಗಿದೆ. ಜಿಲ್ಲೆಯ ಕನ್ನಡ ಪತ್ರಕರ್ತರ ಭಾಷಾ ಬಳಕೆಯು ಯಾವುದೇ ಸಂಶೋಧನೆಗಿಂತ ಕಡಿಮೆಯೇನಿಲ್ಲ. ಪ್ರತಿ ಬಾರಿಯೂ ಹೊಸ ಹೊಸ ಶಬ್ಧಗಳ ಪ್ರಯೋಗಗಳ ಮೂಲಕ ಅವರು ಅಚ್ಚರಿಗೊಳಿಸುತ್ತಾರೆ ಎಂದು ಹೇಳಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಂಶುದ್ದೀನ್, ‘ಈ ಪ್ರಶಸ್ತಿಯು ಜವಾಬ್ಧಾರಿಯನ್ನು ಹೆಚ್ಚಿಸಿದೆ’ ಎಂದರು.
ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಯವರು ಪದ್ಯಾಣ ಗೋಪಾಲ ಕೃಷ್ಣ (ಪ.ಗೋ.) ಅವರ ಜತೆಗಿನ ತನ್ನ ಒಡನಾಟವನ್ನು ಹಂಚಿಕೊಂಡರು. ಚಾಣಾಕ್ಷ ಪತ್ರಕರ್ತರಾಗಿದ್ದ ಪ.ಗೋ, ತಮ್ಮ ವೃತ್ತಿಯಲ್ಲಿ ಎಂದಿಗೂ ಜಾತಿ, ಧರ್ಮ, ಭಾಷೆ ಬಗ್ಗೆ ವ್ಯತ್ಯಾಸ ಮಾಡಿದವರಲ್ಲ ಎಂದು ಚಿದಂಬರ ಬೈಕಂಪಾಡಿಯವರು ಹಳೇ ನೆನಪುಗಳನ್ನು ಬಿಚ್ಚಿಟ್ಟರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಅಧ್ಯಕ್ಷತೆ ವಹಿಸಿದ್ದರು.
ಪ್ರಯೋಗಶೀಲ ಪತ್ರಕರ್ತರರಾಗಿದ್ದ ಪ.ಗೋ. ಅವರ ಹೆಸರಿನಲ್ಲಿ ನೀಡುತ್ತಿರುವ ಪ್ರಶಸ್ತಿಯಂತೆ ಮುಂದೆ ಜಿಲ್ಲೆಯ ಇತರ ಹಿರಿಯ ಪತ್ರಕರ್ತರ ಹೆಸರಿನಲ್ಲಿಯೂ ಪ್ರಶಸ್ತಿಗಳನ್ನು ಆರಂಭಿಸುವ ಚಿಂತನೆ ಇದೆ ಎಂದರು.
ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಕೋಶಾಧಿಕಾರಿ ವಿಜಯ್ ಕೋಟ್ಯಾನ್ ಪಡು ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ ವಂದಿಸಿದರು. ಉಪಾಧ್ಯಕ್ಷ ಮುಹಮ್ಮದ್ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net