ಕಳೆದ ನಾಲ್ಕೂವರೆ ದಶಕಗಳಿಗೂ ಹೆಚ್ಚು ಕಾಲ ಸಹಕಾರ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಸಂಸ್ಥಾಪಕರಾಗಿದ್ದು, ನವದೆಹಲಿಯ ಇಪ್ಕೋ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಅನೇಕ ಸಹಕಾರಿ ಸಂಸ್ಥೆಗಳ ಮಾರ್ಗದರ್ಶಕರಾಗಿ, ಅವುಗಳ ಅಭಿವೃದ್ಧಿಗೆ ಸಕ್ರಿಯವಾಗಿ ಕೈಜೋಡಿಸಿದ್ದಾರೆ. ಅವರ ಸಮಾಜಮುಖಿ ಸೇವೆ ಮತ್ತು ನಿಷ್ಠೆಯ ಪರಿಕಲ್ಪನೆಗೆ ಮಾನ್ಯತೆ ನೀಡುವಂತೆ, ಅವರಿಗೆ ಎರಡು ಗೌರವ ಡಾಕ್ಟರೇಟ್ ಸೇರಿದಂತೆ ಅನೇಕ ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿರುವುದು ಗಮನಾರ್ಹ.