ಫೆ.24ರಂದು ಡಾ.ಎಂ.ಎನ್.ಆರ್ ಹುಟ್ಟು ಹಬ್ಬಾಚರಣೆ, ಸವಲತ್ತುಗಳ ವಿತರಣೆ

 ಡಾ.ಎಂ.ಎನ್.ರಾಜೇಂದ್ರ ಕುಮಾರ್
ಡಾ.ಎಂ.ಎನ್.ರಾಜೇಂದ್ರ ಕುಮಾರ್
Published on
ಮಂಗಳೂರು: ಸಹಕಾರಿ ಕ್ಷೇತ್ರದ ಧುರೀಣ, ಸಾಮಾಜಿಕ ಮುಂದಾಳು, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟು ಹಬ್ಬ ಆಚರಣೆ ಹಾಗೂ 77ಮಂದಿ ಅರ್ಹ ಲಾನುಭವಿಗಳಿಗೆ ಸವಲತ್ತುಗಳ ವಿತರಣೆ ೆ.24ರಂದು ಬೆಳಗ್ಗೆ 10.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ.
ನಗರದ ಎಸ್‌ಸಿಡಿಸಿ ಬ್ಯಾಂಕ್ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಿನಂದನಾ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು,ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ನವೋದಯ ಸ್ವಸಹಾಯ ಸಂಘದ ಮೂಲಕ ಮಹಿಳಾ ಸಶಕ್ತೀಕರಣಕ್ಕೆ ಕಾರಣೀಭೂತರಾದವರು. ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 77ಮಂದಿ ಅರ್ಹ ಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮವು ಆಯೋಜನೆಯಾಗಿದೆ. ಸಹಕಾರ ಕ್ಷೇತ್ರವು ಸರ್ವಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲ ವರ್ಗದ ಲಾನುಭವಿಗಳನ್ನು ಗುರುತಿಸಿ ಸವಲತ್ತುಗಳನ್ನು ವಿತರಿಸಲಾಗುವುದು ಎಂದರು.
ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಉದ್ಘಾಟಿಸುವರು. ಸಮಸ್ತ ಸಹಕಾರಿಗಳ ಪರವಾಗಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಭಿವಂದನೆಯನ್ನು ಸ್ವೀಕರಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯ್ಲಿ ಅಭಿನಂದನಾ ಭಾಷಣ ಮಾಡಲಿರುವರು. ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿರುವರು ಎಂದರು.
ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಭಿನಂದನಾ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಎಸ್.ಕೋಟ್ಯಾನ್, ಕಾರ್ಯಾಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕಿನ ನಿರ್ದೇಶಕರುಗಳಾದ ಎಂ.ವಾದಿರಾಜ ಶೆಟ್ಟಿ, ಎಸ್.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಉಪಸ್ಥಿತರಿದ್ದರು.
77ಮಂದಿ ಸವಲತ್ತು ವಿತರಣೆ
ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರಕುಮಾರ್ ಅವರ 77ನೇ ಹುಟ್ಟುಹಬ್ಬದ ಅಂಗವಾಗಿ 35ಮಂದಿಗೆ ಸಹಾಯಧನ, 30 ಮಂದಿಗೆ ವಿದ್ಯಾರ್ಥಿವೇತನ, 5 ಮಂದಿಗೆ ಹೊಲಿಗೆಯಂತ್ರ, ಇಬ್ಬರು ವಿಶೇಷ ಚೇತನರಿಗೆ ನೆರವು, 7ಮಂದಿಗೆ ಜೇನುಗೂಡು ಪೆಟ್ಟಿಗೆ ಸೇರಿದಂತೆ ಒಟ್ಟು 77 ಮಂದಿಗೆ ಸವಲತ್ತು ವಿತರಣೆ ಮಾಡಲಾಗುವುದು ಎಂದು ಬೆಳಪು ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net