ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರಿ ಕ್ಷೇತ್ರಕ್ಕೆ ಆದರ್ಶ : ಎಚ್.ವಸಂತ್ ಬೆರ್ನಾರ್ಡ್ ಬಣ್ಣನೆ

 ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಭಾವಚಿತ್ರ ಬಿಡಿಸುವ ಸ್ಪರ್ಧೆ ಉದ್ಘಾಟಿಸಲಾಯಿತು.
ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಭಾವಚಿತ್ರ ಬಿಡಿಸುವ ಸ್ಪರ್ಧೆ ಉದ್ಘಾಟಿಸಲಾಯಿತು.
Published on

ಹಳೆಯಂಗಡಿ: ದ.ಕ. ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ 30 ವರ್ಷಗಳಿಂದ ಸಹಕಾರಿ ಕ್ರಾಂತಿ ಮಾಡಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸಮಾನವಾಗಿ ಸಹಕಾರಿ ಕ್ಷೇತ್ರವನ್ನು ಬೆಳೆಸಿ ಅದಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಮೇರು ವ್ಯಕ್ತಿತ್ವ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರದು ಎಂದು ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಹೇಳಿದರು.

ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯಲ್ಲಿ ಸಹಕಾರಿ ಸಪ್ತಾಹದ ಅಂಗವಾಗಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಭಾವಚಿತ್ರ ಬಿಡಿಸುವ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಂಎನ್‌ಆರ್ ಅವರ ಸಹಕಾರಿ ಕ್ರಾಂತಿಯ ತಿಳಿವಳಿಕೆ ಮುಂದಿನ ಜನಾಂಗಕ್ಕೆ ಮುಟ್ಟಿಸುವ ಚಿಂತನೆಯೊಂದಿಗೆ ಅವರ ಭಾವಚಿತ್ರ ಬಿಡಿಸುವ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ಗೌರವ ಸಲ್ಲಿಸುತ್ತಿದ್ದೇವೆ ಎಂದರು.

ಚಲನಚಿತ್ರ ನಟಿ ಚಿರಶ್ರೀ ಅಂಚನ್ ಉದ್ಘಾಟಿಸಿದರು. ಶಿಕ್ಷಕಿ ಮಂಜುಳಾ ಶೆಟ್ಟಿ, ಪೂಜಾ ಟ್ಯೂಷನ್ ಕ್ಲಾಸಸ್ ಹಳೆಯಂಗಡಿ ಮಾಲೀಕ ಗೋಪಾಲಕೃಷ್ಣ ಬಿ.ಕೋಟ್ಯಾನ್ ಶುಭ ಹಾರೈಸಿದರು.

ಸ್ವಸಹಾಯ ಗುಂಪಿನ ಪ್ರೇರಕಿ ನಿರಂಜಲ ಪ್ರಾರ್ಥಿಸಿದರು. ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು. ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಲೋಲಾಕ್ಷಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net