ಅಖಿಲ ಭಾರತ ಅಥ್ಲೆಟಿಕ್ಸ್‌ನಲ್ಲಿ ನಶಾಮುಕ್ತ ಭಾರತ ವಾಕಥಾನ್ ನಡೆಯಿತು. ಡಾ.ಭಗವಾನ್, ಡಾ.ಇಫ್ತೀಕರ್, ಮೊಹಮ್ಮದ್ ಮೊಹಿಸೀನ್,ಡಿ.ಸುರೇಂದ್ರ ಕುಮಾರ್, ಅರ್ಜುನ್ ಒಡೆಯರ್, ವಿವೇಕ್ ಆಳ್ವ, ಡಾ.ವಿನಯ್ ಆಳ್ವ, ಶಿವಾಂಗಿ ರೆಡ್ಡಿ ಇದ್ದರು.
ಯುವಜನತೆಯನ್ನು ದುಶ್ಚಟಗಳಿಂದ ರಕ್ಷಿಸುವುದು ನಮ್ಮ ಆಯ್ಕೆ ಅಲ್ಲ, ಅನಿವಾರ್ಯತೆ. ಯುವಜನತೆಯನ್ನು ವ್ಯಸನಮುಕ್ತಗೊಳಿಸುವ ನಿಟ್ಟಿನಲ್ಲಿ ದಿಶಾ ಬೋಧ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಯೋಗ ಮತ್ತು ಧ್ಯಾನ ಕಾರ್ಯಕ್ರಮ ಆರಂಭಿಸಲಾಗುವುದು ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಭಗವಾನ್ ಹೇಳಿದರು.
ಚೌಟರ ಅರಮನೆಯ ರಾಣಿ ಅಬ್ಬಕ್ಕ ಪ್ರತಿಮೆ ವೃತ್ತದಿಂದ ಸ್ವರಾಜ್ ಮೈದಾನದವರೆಗೆ ವಾಕಥಾನ್ ಸಾಗಿ ಬಂತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಡಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 3 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಾಕಾಥಾನ್‌ನಲ್ಲಿ ಪಾಲ್ಗೊಂಡರು. ಕುಲಪತಿ ಡಾ.ಭಗವಾನ್ ಪ್ರತಿಜ್ಞಾ ವಿಧಿ ಬೋಧಿಸಿದರು.