ಪಿಎಂಎಲ್‌ಎ ಅಡಿಯಲ್ಲಿ ನಡೆಸಿದ ತನಿಖೆಯಲ್ಲಿ, ಹೂಡಿಕೆದಾರರಿಂದ 2,110.97 ಕೋಟಿ ರೂ.ಸಂಗ್ರಹಿಸಿದ್ದರೂ, ಅದರ ಒಂದು ಭಾಗದಷ್ಟನ್ನು ಮಾತ್ರ ಹೂಡಿಕೆದಾರರಿಗೆ ಮರುಪಾವತಿಸಿರುವುದು ಬೆಳಕಿಗೆ ಬಂದಿದೆ. 2019 ರಿಂದ ಸಂಸ್ಥೆಯು ಷೇರು ಮಾರುಕಟ್ಟೆಯಲ್ಲಿ ಭಾರಿ ಪ್ರಮಾಣದ ನಷ್ಟ ಅನುಭವಿಸಿದ್ದರಿಂದ, ವರ್ಷದಿಂದ ವರ್ಷಕ್ಕೆ ನಷ್ಟ ಹೆಚ್ಚಾಗಿದೆ ಎಂದು ತನಿಖೆಯಲ್ಲಿ ಪತ್ತೆಯಾಗಿದೆ. ಇದನ್ನು ಮರೆಮಾಚಿ ಮಾರುಕಟ್ಟೆಯಲ್ಲಿ ಸಂಸ್ಥೆಯ ಮೇಲಿನ ವಿಶ್ವಾಸವನ್ನು ಉಳಿಸಿಕೊಳ್ಳುವ ಉದ್ದೇಶದಿಂದ, ಹೂಡಿಕೆದಾರರಿಂದ ಸಂಗ್ರಹಿಸಿದ ಹಣವನ್ನು ಹಿಂದಿನ ಹೂಡಿಕೆದಾರರಿಗೆ ನೀಡಬೇಕಿದ್ದ ಬಡ್ಡಿ ಪಾವತಿಗೆ ನೇರವಾಗಿ ವರ್ಗಾಯಿಸಲಾಗುತ್ತಿತ್ತು.