ನಿರಂತರ ಅಧ್ಯಯನವೇ ಯಶಸ್ಸಿನ ಮೂಲಮಂತ್ರ : ಎಚ್.ರಾಜೇಶ್ ಪ್ರಸಾದ್

  ಮರಾಟಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರದಲ್ಲಿ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ರಾಮ ನಾಯ್ಕ ಕೆ. ಅವರನ್ನು ಸನ್ಮಾನಿಸಲಾಯಿತು. ಎಚ್.ರಾಜೇಶ್ ಪ್ರಸಾದ್, ಡಾ.ಕೆ.ಸುಂದರ ನಾಯ್ಕ, ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಮೊದಲಾದವರಿದ್ದರು.
ಮರಾಟಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರದಲ್ಲಿ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ರಾಮ ನಾಯ್ಕ ಕೆ. ಅವರನ್ನು ಸನ್ಮಾನಿಸಲಾಯಿತು. ಎಚ್.ರಾಜೇಶ್ ಪ್ರಸಾದ್, ಡಾ.ಕೆ.ಸುಂದರ ನಾಯ್ಕ, ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಮೊದಲಾದವರಿದ್ದರು.
Published on
ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಮಂಗಳೂರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಕೆನರಾ ಬ್ಯಾಂಕ್ ಬೆಂಗಳೂರು ಹಾಗೂ ಮರಾಟಿ ಸಮಾಜ ಸೇವಾ ಸಂಘ ಮೂಡುಬಿದಿರೆ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಮಂಗಳೂರು ಅಧ್ಯಕ್ಷ ಡಾ.ಕೆ.ಸುಂದರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಮರಾಟಿ ಸಮುದಾಯಕ್ಕೆ ನೀಡಿದ ಸೇವೆ ಪರಿಗಣಿಸಿ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ರಾಮ ನಾಯ್ಕ ಕೆ. ಅವರನ್ನು ಸನ್ಮಾನಿಸಲಾಯಿತು.
ಸಂಪನ್ಮೂಲ ವ್ಯಕ್ತಿ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಒಕ್ಕೂಟದ ಪ್ರದಾನ ಕಾರ್ಯದರ್ಶಿ ವಾಸು ನಾಯ್ಕ, ಮೂಡುಬಿದಿರೆ ಮರಾಟಿ ಸಂಘದ ಅಧ್ಯಕ್ಷ ಶಂಕರ್ ನಾಯ್ಕ ಉಪಸ್ಥಿತರಿದ್ದರು. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಹಾಗೂ ಪಾಲಕರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net