ಪರಿಸರ ಸ್ವಚ್ಛತೆಯಿಂದ ಆರೋಗ್ಯ ವೃದ್ಧಿ

ಸ್ವಚ್ಛತಾ ಹೀ ಸೇವಾ-2026 ಕಾರ್ಯಕ್ರಮ
 ತೋಕೂರು ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ-2026. ಕಾರ್ಯಕ್ರಮ ತೋಕೂರು ಬಳಿ ನಡೆಯಿತು.
ತೋಕೂರು ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ-2026. ಕಾರ್ಯಕ್ರಮ ತೋಕೂರು ಬಳಿ ನಡೆಯಿತು.
Published on: 

ಹಳೆಯಂಗಡಿ: ಜನರ ಆರೋಗ್ಯ ಸುಧಾರಿಸುವಲ್ಲಿ ಪರಿಸರ ಸ್ವಚ್ಛತೆ ಬಹು ಮುಖ್ಯಪಾತ್ರ ವಹಿಸುತ್ತಿದ್ದು, ಸ್ವಚ್ಛತೆ ಮನೆ ಪರಿಸರದಿಂದ ಆರಂಭಗೊಂಡು ಸಾರ್ವಜನಿಕ ವಲಯದಲ್ಲಿ ನಡೆದರೆ ಕಾರ್ಯಕ್ರಮ ಸಾರ್ಥಕ್ಯ ಕಂಡುಕೊಳ್ಳಲು ಸಾಧ್ಯ ಎಂದು ದ.ಕ. ಜಿಪಂ ಮಾಜಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು ಹೇಳಿದರು.

ತೋಕೂರು ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತೋಕೂರಿನಲ್ಲಿ ಸ್ವಚ್ಛತಾ ಹೀ ಸೇವಾ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವಚ್ಛತಾ ಅಭಿಯಾನದಲ್ಲಿ ಪಡುಪಣಂಬೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮೋಹನ್ ದಾಸ್, ಮಾಜಿ ಉಪಾಧ್ಯಕ್ಷ ಹೇಮನಾಥ್ ಅಮೀನ್, ಸಂತೋಷ್ ಕುಮಾರ್, ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪುರುಷೋತ್ತಮ ಕೋಟ್ಯಾನ್, ಪಿ.ಸಿ.ಎ ಬ್ಯಾಂಕ್ ನಿರ್ದೇಶಕ ಧರ್ಮಾನಂದ ಶೆಟ್ಟಿಗಾರ್, ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಸುರೇಶ್ ಶೆಟ್ಟಿ, ಪದಾಧಿಕಾರಿಗಳು, ಸದಸ್ಯರು, ತೋಕೂರು ಯುವಕ ಸಂಘದ ಅಧ್ಯಕ್ಷ ವಾಮನ ದೇವಾಡಿಗ, ಸದಸ್ಯರು ಗ್ರಾಮಸ್ಥರು ಹಾಗೂ ಮತ್ತಿತರರು ಭಾಗವಹಿಸಿದರು.

ಸ್ವಚ್ಛತಾ ಶ್ರಮದಾನ ನಡೆಯಿತು ಹಾಗೂ ಪ್ಲಾಸ್ಟಿಕ್ ಮರುಬಳಕೆ ಕೇಂದ್ರಕ್ಕೆ ನೀಡಲು ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net