ಏಕ ಮನಸ್ಸಿನಿಂದ ಭಗವತಿಯ ಸೇವೆ : ಶೆಡ್ಡೆ ಮಂಜುನಾಥ ಭಂಡಾರಿ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆಗೆ ಚಾಲನೆ ನೀಡಲಾಯಿತು. ಶೆಡ್ಡೆ ಮಂಜುನಾಥ ಭಂಡಾರಿ, ಪ್ರಧಾನ ಅರ್ಚಕ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಮೊದಲಾದವರಿದ್ದರು.
ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆಗೆ ಚಾಲನೆ ನೀಡಲಾಯಿತು. ಶೆಡ್ಡೆ ಮಂಜುನಾಥ ಭಂಡಾರಿ, ಪ್ರಧಾನ ಅರ್ಚಕ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಮೊದಲಾದವರಿದ್ದರು.
Published on

ಮೂಲ್ಕಿ: ಹಳೆಯಂಗಡಿ ಸಮೀಪದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಮಾರ್ಚ್ ತಿಂಗಳಲ್ಲಿ ಜರುಗಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ 48 ದಿನಗಳ ಸಂಧ್ಯಾ ಭಜನಾ ಸಂಕೀರ್ತನೆ ಮಾರ್ಚ್ 2ರ ತನಕ ನಡೆಯಲಿದ್ದು ಬುಧವಾರ ಸಂಜೆ ಭಜನಾ ಸಂಕೀರ್ತನೆಗೆ ಚಾಲನೆ ನೀಡಲಾಯಿತು.



ಅದ್ಯಪಾಡಿ ಶ್ರೀ ನೀಲಕಂಠ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶೆಡ್ಡೆ ಮಂಜುನಾಥ ಭಂಡಾರಿ ಭಜನಾ ಸಂಕೀರ್ತನೆಯ ಉದ್ಘಾಟಿಸಿ ಮಾತನಾಡಿ, ಅಧಿಕಾರದ ಆಸೆ ಬೇಡ. ಏಕ ಮನಸ್ಸಿನಿಂದ ಭಗವತಿಯ ಸೇವೆ ಮಾಡಿ ಬ್ರಹ್ಮಕಲಶೋತ್ಸವ ಯಶಸ್ವಿಗೊಳಿಸಿ ಎಂದರು.


ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಆನುವಂಶಿಕ ಮೊಕ್ತೇಸರ ಹಾಗೂ ಪ್ರಧಾನ ಅರ್ಚಕ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಆಶೀರ್ವಚನ ನೀಡಿದರು.


ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ಅಧ್ಯಕ್ಷತೆ ವಹಿಸಿಎಂದರು. ಕ್ಷೇತ್ರದ ಆಡಳಿತ ಮೊಕ್ತೇಸರ ಚಂದ್ರಶೇಖರ ಬೆಳ್ಚಡ ಗಂಪಮನೆ ಕಟೀಲು, ಆಡಳಿತ ಸಮಿತಿ ಅಧ್ಯಕ್ಷ ವಾಮನ ಇಡ್ಯಾ, ಅಭಿವೃದ್ದಿ ಸಮಿತಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಬ್ರಹ್ಮಕಲಶೋತ್ಸವ ಸಂಧ್ಯಾ ಭಜನಾ ಸಂಕೀರ್ತನಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮೂಡುಶೆಡ್ಡೆ, ಅಭಿವೃದ್ಧಿ ಸಮಿತಿ ಸದಸ್ಯ ಮುರ ಸದಾಶಿವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಚಂದ್ರಶೇಖರ್ ನಾಣಿಲ್ ಮತ್ತಿತರರು ಉಪಸ್ಥಿತರಿದ್ದರು. ರಾಜೇಂದ್ರ ಪ್ರಸಾದ್ ಎಕ್ಕಾರು ನಿರೂಪಿಸಿದರು. ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net