ಸುಧಾರಿತ ಗುರುಕುಲ ಮಾದರಿಯಲ್ಲಿ ಶಿಕ್ಷಣ : ತಿಮ್ಮಯ್ಯ ಶೆಟ್ಟಿ ಶ್ಲಾಘನೆ

ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾ ಪರ್ವ ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾ ಪರ್ವ ಕಾರ್ಯಕ್ರಮ ನಡೆಯಿತು.
Published on

ಮೂಡುಬಿದಿರೆ: ಶಿಕ್ಷಣ, ಶಿಸ್ತು ಮತ್ತು ಸದಾಚಾರದ ಮೌಲ್ಯ ಬೆಳೆಸುವಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತಿದೆ. ಸಂಸ್ಥೆ ಸುಧಾರಿತ ಗುರುಕುಲ ಮಾದರಿಯಲ್ಲಿ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ. ಈ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ನಿಜಕ್ಕೂ ಭಾಗ್ಯವಂತರು ಎಂದು ಉದ್ಯಮಿ ತಿಮ್ಮಯ್ಯ ಶೆಟ್ಟಿ ಹೇಳಿದರು.

ಕಲ್ಲಬೆಟ್ಟು ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ವಾರ್ಷಿಕೋತ್ಸವ ಅಂಗವಾಗಿ ಪ್ರತಿಭಾ ಪರ್ವ ಬಹುಮಾನ ವಿತರಣಾ ಸಮಾರಂಭ ಗುರುವಾರ ಉದ್ಘಾಟಿಸಿ ಮಾತನಾಡಿದರು.

ಮೂಡುಬಿದಿರೆ ತಾಲೂಕು ಕಚೇರಿ ಕಂದಾಯ ಅಧಿಕಾರಿ ಬಿ.ಮಂಜುನಾಥ್ ಮಾತನಾಡಿ, ಕ್ರೀಡೆ ಜೀವನದಲ್ಲಿ ಶಿಸ್ತನ್ನು ಕಲಿಸುತ್ತದೆ. ಪ್ರತಿ ವಿದ್ಯಾರ್ಥಿಯೂ ತನ್ನದೇ ಆದ ವಿಶಿಷ್ಟ ಪ್ರತಿಭೆ ಮತ್ತು ಸಾಮರ್ಥ್ಯ ಹೊಂದಿರುತ್ತಾನೆ ಎಂದರು.

ಎಕ್ಸಲೆಂಟ್ ವಿದ್ಯಾಸಂಸ್ಥೆ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ಜೀವನದಲ್ಲಿ ಯಶಸ್ಸು ಗಳಿಸಲು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮ ಅಗತ್ಯ ಎಂದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಣದಲ್ಲಿ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿಗಳಿಗೆ ಶ್ಲಾಘನೀಯ ಪದಕ, ಪ್ರಶಸ್ತಿ ಪತ್ರಗಳು ಮತ್ತು ವಿಶೇಷ ಬಹುಮಾನ ನೀಡಿ ಗೌರವಿಸಲಾಯಿತು. ಸಂಸ್ಥೆ ಶೈಕ್ಷಣಿಕ ನಿರ್ದೇಶಕ ಪುಷ್ಪರಾಜ್, ಮುಖ್ಯಶಿಕ್ಷಕ ಶಿವಪ್ರಸಾದ್ ಭಟ್, ಉಪ ಮುಖ್ಯಶಿಕ್ಷಕ ಜಯಶೀಲ್ ಉಪಸ್ಥಿತರಿದ್ದರು.

ಶಿಕ್ಷಕರಾದ ಪ್ರಜ್ವಲ್ ಶೆಟ್ಟಿ, ಅನಿತಾ, ಮಂಜೂಷಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಪೃಥ್ವಿ ಶೆಟ್ಟಿ ಸ್ವಾಗತಿಸಿ. ರಕ್ಷಿತಾ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net