ಎಂಆರ್‌ಪಿಎಲ್‌ನಲ್ಲಿ ಸ್ಫೋಟ, ಕಂಪಿಸಿದ ಭೂಮಿ, ಆತಂಕಗೊಂಡ ಜನರು

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್(ಎಂಆರ್‌ಪಿಎಲ್) ಸಂಸ್ಥೆ ಭಾಗದಲ್ಲಿ ಭಾರಿ ಸ್ಪೋಟ ಸಂಭವಿಸಿದೆ.
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್(ಎಂಆರ್‌ಪಿಎಲ್) ಸಂಸ್ಥೆ ಭಾಗದಲ್ಲಿ ಭಾರಿ ಸ್ಪೋಟ ಸಂಭವಿಸಿದೆ.
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್(ಎಂಆರ್‌ಪಿಎಲ್) ಸಂಸ್ಥೆ ಭಾಗದಲ್ಲಿ ಭಾರಿ ಸ್ಪೋಟ ಸಂಭವಿಸಿದೆ.
Published on: 

ಮಂಗಳೂರು: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್(ಎಂಆರ್‌ಪಿಎಲ್) ಸಂಸ್ಥೆ ಭಾಗದಲ್ಲಿ ಭಾರಿ ಸ್ಪೋಟ ಸಂಭವಿಸಿದೆ. ಆ ಪ್ರದೇಶದ ತುಂಬಾ ದಟ್ಟ ಹೊಗೆ ಆವರಿಸಿಕೊಂಡಿದ್ದು ಭಾರೀ ಆತಂಕ ಎದುರಾಗಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಸಮೀಪದಲ್ಲಿರುವ ಮಂಗಳೂರು ವಿಮಾನ ನಿಲ್ದಾಣದ ಗಾಜುಗಳು ಪುಡಿಪುಡಿಯಾಗಿದೆ. ಎಂಆರ್‌ಪಿಎಲ್‌ನ ಸಿಎಸ್‌ಟಿ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ.

ಮಂಗಳೂರು ನಗರದ ಬಹುತೇಕ ಕಡೆ ಭಾರಿ ಶಬ್ದ ಕೇಳಿಸಿದ್ದು, ಮನೆಗಳು ಕಂಪಿಸಿವೆ. ಜೋಕಟ್ಟೆ ಗ್ರಾಮದ ಬಳಿ ಇರುವ ಎಂಆರ್‌ಪಿಎಲ್ ಸಂಕೀರ್ಣದಿಂದ ಈ ಭಾರಿ ಶಬ್ದದ ಬೆನ್ನಲ್ಲೇ ಆಕಾಶದೆತ್ತರಕ್ಕೆ ದಟ್ಟವಾದ ಕಪ್ಪು ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯ ಒಳಗಡೆಯೇ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.

ವಿಷಯ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅವಘಡಲ್ಲಿ 9 ಮಂದಿಗೆ ಗಾಯವಾಗಿದ್ದು, 6 ಮಂದಿಗೆ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಪ್ರಸ್ತುತ ಬೆಂಕಿ ನಿಯಂತ್ರಣ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಪಂ ಸಿಇಒ ನರ್ವಾಡೆ ವಿನಾಯಕ್ ಕಾರ್ಬಾರಿ ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net