ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಬೆಂಕಿ, ಜನಾಕ್ರೋಶ

ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಕಸ ವಿಲೇವಾರಿ ಘಟಕದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಬೆಂಕಿ ಹಾಕಿರುವುದು.
ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಕಸ ವಿಲೇವಾರಿ ಘಟಕದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಬೆಂಕಿ ಹಾಕಿರುವುದು.
Published on

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಕಸ ವಿಲೇವಾರಿ ಘಟಕದಲ್ಲಿ ಪ್ಲಾಸ್ಟಿಕ್ ಚೀಲಗಳು ಹಾಗೂ ಇತರ ಪ್ಲಾಸ್ಟಿಕ್ ತ್ಯಾಜ್ಯಗಳಿಗೆ ಬೆಂಕಿ ಇಡಲಾಗಿದ್ದು, ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಕಿ ಹಚ್ಚಿದ ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ವಾಯುಮಾಲಿನ್ಯ ಉಂಟಾಗಿದೆ. ಈ ರೀತಿಯ ಟನೆ ಮತ್ತೆ ನಡೆಯಬಾರದು. ವೈಜ್ಞಾನಿಕವಾಗಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಮಾಡುವ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕುಕ್ಕೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಬೆಂಕಿ ಇಟ್ಟು ಸುಡುವುದು ಸರಿಯಲ್ಲ. ಇದು ಜನರ ಆರೋಗ್ಯ ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತದೆ. ಕುಕ್ಕೆ ಸುಬ್ರಹ್ಮಣ್ಯ ದೇಶಾದ್ಯಂತ ಪ್ರಸಿದ್ಧವಾದ ಧಾರ್ಮಿಕ ಕ್ಷೇತ್ರ. ಇಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆ ಅತ್ಯಂತ ಮಹತ್ವದ್ದಾಗಿದೆ. ಗ್ರಾಮ ಪಂಚಾಯಿತಿ ತಕ್ಷಣ ವೈಜ್ಞಾನಿಕ ರೀತಿಯಲ್ಲಿ ಪ್ಲಾಸ್ಟಿಕ್ ಕಸದ ವಿಲೇವಾರಿ ವ್ಯವಸ್ಥೆ ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net