ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ.
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ.
Published on
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು ಅಡ್ಕ ಎಂಬಲ್ಲಿ ಗುರುವಾರ ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಹಿಂಬದಿ ವಾಹನ ಸವಾರ ಅಪಾಯದ ಮುನ್ಸೂಚನೆ ನೀಡಿದ ಪರಿಣಾಮ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಡ್ಕದ ಗ್ಯಾರೇಜ್‌ನಲ್ಲಿ ರಿಪೇರಿ ಮಾಡಿದ್ದ ಕಾರನ್ನು ತಲಪಾಡಿ ನಿವಾಸಿ ರಿಯಾಝ್ ವಾಪಸು ಪಡೆದು ಪೆಟ್ರೋಲ್ ತುಂಬಿಸಿ ತಲಪಾಡಿಯತ್ತ ಪ್ರಯಾಣಿಸುತ್ತಿದ್ದರು. ಅಡ್ಕ ಬಳಿ ತಲುಪಿದಾಗ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ರಿಯಾಝ್ ಅವರ ಗಮನಕ್ಕೆ ಬಂದಿರಲಿಲ್ಲ. ಕಾರಿನ ಹಿಂಬದಿಯಲ್ಲಿದ್ದ ವಾಹನವೊಂದರ ಸವಾರ ಮಾಹಿತಿ ನೀಡಿದ್ದು ತಕ್ಷಣವೇ ಕಾರನ್ನು ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಹೊರಕ್ಕಿಳಿದಿದ್ದರು. ಕ್ಷಣಾರ್ಧದಲ್ಲಿ ಕಾರಿಗೆ ಸಂಪೂರ್ಣ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಕಾರಿನಲ್ಲಿ ಟ್ಯಾಂಕ್ ತುಂಬಾ ಪೆಟ್ರೋಲ್ ಇದ್ದ ಪರಿಣಾಮ ಕಾರಿಗೆ ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net