ಮಂಗಳೂರು ವಿಮಾನ ನಿಲ್ದಾಣದಿಂದ ಮಣ್ಣಗುಡ್ಡಕ್ಕೆ ಕಡೆಗೆ ತೆರಳುತ್ತಿದ್ದ ಕಾರಿನ ಒಳಭಾಗದಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಕಾರಿನಿಂದ ಇಳಿದು ಮಣ್ಣಗುಡ್ಡ ನಿವಾಸಿ ಶೇಖರ್ ಶೆಟ್ಟಿ ಅವರು ಹೊರಬಂದಿದ್ದಾರೆ. ಕದ್ರಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಕದ್ರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.