ಉಡುಪಿ-ಧರ್ಮಸ್ಥಳ ನಂಟು ಅತ್ಯಂತ ಪುರಾತನ : ಡಾ.ಡಿ.ವೀರೇಂದ್ರ ಹೆಗ್ಗಡೆ

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಪರ್ಯಾಯ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ಗೌರವಿಸಿದರು. ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಮೊದಲಾದವರಿದ್ದರು.
ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಪರ್ಯಾಯ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ಗೌರವಿಸಿದರು. ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಮೊದಲಾದವರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಉಡುಪಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ನಡುವಿನ ಸಂಬಂಧ ಅತ್ಯಂತ ಪುರಾತನ ಕಾಲದಿಂದ ಬೆಳೆದುಬಂದಿದೆ. 20ರ ಹರೆಯದಲ್ಲಿ ಧರ್ಮಾಧಿಕಾರಿಯಾಗಿ ಪಟ್ಟಕ್ಕೆ ಬಂದಾಗ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಕ್ಷೇತ್ರಕ್ಕೆ ಬಂದು ಆಶೀರ್ವದಿಸಿ ಮಾರ್ಗದರ್ಶನ ನೀಡಿದ್ದರು. ಅವರೂ 20ರ ಹರೆಯದಲ್ಲಿ ಶ್ರೀಕೃಷ್ಣಪೂಜೆಯ ಪ್ರಥಮ ಪರ್ಯಾಯ ನಡೆಸಿದ್ದರು. ಅಂತೆಯೇ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀ ತನ್ನ 20ರ ಹರೆಯದಲ್ಲಿ ಪ್ರಥಮ ಪರ್ಯಾಯದ ಸರ್ವಜ್ಞ ಪೀಠಾರೋಹಣ ಮಾಡಿದ್ದಾರೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಶ್ರೀ ವಾಮನತೀರ್ಥ ವೇದಿಕೆಯಲ್ಲಿ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಗಳ ಪ್ರಥಮ ಪರ್ಯಾಯೋತ್ಸವ ಸಮಾರಂಭದ ರಾಜದರ್ಬಾರ್‌ನಲ್ಲಿ ಭಾಗವಹಿಸಿ ಮಾತನಾಡಿದರು.
ಪರ್ಯಾಯ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಪರ್ಯಾಯ ದರ್ಬಾರ್‌ನಲ್ಲಿ ಗೌರವಿಸಿದರು.
ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ, ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ, ಅದಮಾರು ಮಠದ ಕಿರಿಯ ಯತಿ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ, ಪಲಿಮಾರು ಮಠದ ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ, ಮೈಸೂರಿನ ಯದುವೀರ ಕೃಷ್ಣದತ್ತ ಒಡೆಯರ್ ಸಹಿತ ಗಣ್ಯರು ಉಪಸ್ಥಿತರಿದ್ದರು.

ಕ್ಷೇತ್ರದಿಂದ ವಿಶೇಷ ಪ್ರಸಾದ

ಎರಡು ವರ್ಷಗಳ ವಿಶ್ವಗೀತಾ ಪರ್ಯಾಯವನ್ನು ಅದ್ದೂರಿಯಾಗಿ ನಡೆಸಿದ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಪರ್ಯಾಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಸಹಿತ ಗೀತಾ ಲೇಖನ, ಗೀತಾ ಪ್ರಸಾರ ಯಜ್ಞ ಮುಂತಾದ ಹತ್ತು ಹಲವು ಕಾರ್ಯಕ್ರಮಗಳನ್ನು ನಡೆಸಿದ ಉಭಯ ಶ್ರೀಗಳಿಗೆ ಗೌರವಾಭಿನಂದನೆಗಳು. ಎಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿ ಹಾಗೂ ಶ್ರೀ ಕೃಷ್ಣಾನುಗ್ರಹವಿರಲಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net