ಎನ್‌ಎಂಪಿಎ ಉಪಾಧ್ಯಕ್ಷರಾದ ಎಸ್. ಶಾಂತಿ ಅಧ್ಯಕ್ಷತೆ ವಹಿಸಿದ್ದರು. ಬಂದರು ಪ್ರದೇಶದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಶಾಸಕ ಡಾ. ಭರತ್ ಶೆಟ್ಟಿ ಸೇರಿದಂತೆ, ನವ ಮಂಗಳೂರು ಬಂದರು ಪ್ರಾಧಿಕಾರ ಸಿಬ್ಬಂದಿ ವರ್ಗ, ಮಂಡಳಿ ಸದಸ್ಯರು, ಸಂಘಟನೆಗಳ ಪ್ರತಿನಿಧಿಗಳು, ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.