

ಮಂಗಳೂರು : ಬೆಂಗಳೂರು - ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆ ಆರಂಭಿಸುವ ಮುನ್ನದ ಸಿದ್ಧತೆಯಾಗಿ, ದಕ್ಷಿಣ ಪಶ್ಚಿಮ ರೈಲ್ವೆಯ ಮೈಸೂರು ವಿಭಾಗವು ಹಾಸನ-ಮಂಗಳೂರು ರೈಲು ಮಾರ್ಗದ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದಲ್ಲಿ ವಂದೇ ಭಾರತ್ ರೈಲಿನ ಮೊದಲ ಪ್ರಾಯೋಗಿಕ ಸಂಚಾರವನ್ನು ಬುಧವಾರ ಯಶಸ್ವಿಯಾಗಿ ನಡೆಸಿತು.