ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮೋಹನ ಜೆ.ಎಸ್ ಅವರು ಅಪರಾಧಿಗೆ ಬಿಎನ್‌ಎಸ್ ಕಲಂ 74ರ ಜತೆ 62 ರಡಿ ಎರಡೂವರೆ ವರ್ಷ ಕಠಿನ ಸಜೆ, 15,000 ರೂ.ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 6 ತಿಂಗಳು ಸಾದಾ ಸಜೆ, ಬಿಎನ್ ಎಸ್ ಕಲಂ 75(2)(3)ರ ಜತೆ 62ರ ಅಡಿ 1 ವರ್ಷ ಕಠಿನ ಸಜೆ ಹಾಗೂ 10,000 ರೂ.ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳು ಸಾದಾ ಸಜೆ, ಬಿನ್ ಎಸ್ ಕಲಂ 79ರಡಿ 1 ವರ್ಷ ಕಠಿನ ಸಜೆ, 5,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 2 ತಿಂಗಳು ಸಾದಾ ಸಜೆ, ಪೋಕ್ಸೊ ಕಾಯಿದೆಯ ಕಲಂ 12 ರ ಜತೆ 18ರಡಿ 1 ವರ್ಷ ಕಠಿನ ಸಜೆ ಮತ್ತು 10,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ 3 ತಿಂಗಳು ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಒಟ್ಟು ಮೊತ್ತ 40,000 ರೂ.ಗಳಲ್ಲಿ 35,000 ರೂ.ಗಳನ್ನು ಕಿರುಕುಳಕ್ಕೊಳಗಾದ ಬಾಲಕಿಗೆ ಪರಿಹಾರವಾಗಿ ನೀಡಬೇಕು ಎಂದು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಪೋಕ್ಸೊ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ಸಾಕ್ಷಿ ವಿಚಾರಣೆ ನಡೆಸಿ ವಾದ ಮಂಡಿಸಿದ್ದಾರೆ.