ಮೂಲ್ಕಿ: ಉಳ್ಳಾಲ ಕುಂಪಲದಲ್ಲಿ ನಾಪತ್ತೆಯಾದ ವ್ಯಕ್ತಿಯೊಬ್ಬರು ಮೂಲ್ಕಿ ಬಪ್ಪನಾಡು ಬಳಿಯ ಶಾಂಭವಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಕುಂಪಲ ನಿವಾಸಿ ರಾಜೇಶ್(61) ಎಂದು ಗುರುತಿಸಲಾಗಿದೆ. ಅವರು ಕಳೆದ ಕೆಲವು ದಿನದ ಹಿಂದೆ ಮಂಗಳೂರಿನ ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದಿಂದ ನಾಪತ್ತೆಯಾಗಿದ್ದರು.
ಭಾನುವಾರ ಮಧ್ಯಾಹ್ನ ಮೂಲ್ಕಿ ರಾ.ಹೆದ್ದಾರಿ ಬಪ್ಪನಾಡು ಸೇತುವೆಯಲ್ಲಿ ಚಲಿಸುತ್ತಿದ್ದ ಲಾರಿಯ ಚಾಲಕನಿಗೆ ಶಾಂಭವಿ ನದಿಯಲ್ಲಿ ತೇಲಿಕೊಂಡು ಹೋಗುತ್ತಿದ್ದ ಶವ ಕಾಣಸಿಕ್ಕಿದ್ದು ಕೂಡಲೇ ಆತ ಮೂಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಮೂಲ್ಕಿ ಪೊಲೀಸರು ಶವವನ್ನು ಮೇಲಕ್ಕೆತ್ತಿ ಆಂಬುಲೆನ್ಸ್ನಲ್ಲಿ ಸಾಗಿಸಿ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇಟ್ಟು ಪೊಲೀಸರು ವಿವಿಧ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಬಳಿಕ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದೆ.