

ಉಪ್ಪಿನಂಗಡಿ: ಗ್ರಾಮದ ಅಭಿವೃದ್ಧಿಯಲ್ಲಿ ಎಲ್ಲರೂ ಏಕ ಮನಸ್ಸಿನಿಂದ ಕೈಜೋಡಿಸಿದಾಗ ಎಲ್ಲ ಕ್ಷೇತ್ರದ ಜನರಿಗೂ ನ್ಯಾಯ ಒದಗಿಸಬಹುದಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು.
34ನೇ ನೆಕ್ಕಿಲಾಡಿ ಗ್ರಾಮದ ಮೈಂದಡ್ಕದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ನೂತನ ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ನೆಕ್ಕಿಲಾಡಿ ಗ್ರಾಪಂ ಸದಸ್ಯ ವಿಜಯ ಕುಮಾರ್, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೌಸೀಫ್ ಯು.ಟಿ., 34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಅಧ್ಯಕ್ಷೆ ಅನಿ ಮಿನೇಜಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಚಂದ್ರಾವತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ್, ನೆಕ್ಕಿಲಾಡಿ ಗ್ರಾಪಂ ಲೆಕ್ಕಾಧಿಕಾರಿ ದೇವಪ್ಪ ನಾಯ್ಕ ಮೊದಲಾದವರಿದ್ದರು.
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ವಿಕ್ರಂ ಶೆಟ್ಟಿ ಅಂತರ, ರೂಪೇಶ್ ರೈ ಅಲಿಮಾರ್, ಕೃಷ್ಣ ನಾಯ್ಕ, ಪ್ರಮುಖರಾದ ಶಿವಪ್ರಸಾದ್ ರೈ ಕೋಡಿಂಬಾಡಿ, ಲ್ಯಾನ್ಸಿ ಮಸ್ಕರ‌್ಹೇನಸ್, ಬಾಬು ನಾಯ್ಕ, ಅಶೋಕ, ಗಣೇಶ, ಶಬೀರ್ ಅಹಮ್ಮದ್, ಮುಹಮ್ಮದ್ ರಫೀಕ್ ನೆಕ್ಕಿಲಾಡಿ, ಇಸಾಕ್, ಶಿವರಾಮ ಶೆಟ್ಟಿ ಗೋಳ್ತಮಜಲು, ಬಬಿತಾ ಮಿನೇಜಸ್, ಅಬ್ದುಲ್ ಖಾದರ್, ಹಮೀದ್ ಪಿ.ಟಿ., ಪ್ರಹ್ಲಾದ್ ಬೆಳ್ಳಿಪ್ಪಾಡಿ ಮತ್ತಿತರರಿದ್ದರು. ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಉಮಾವತಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ದೇವಕಿ ವಂದಿಸಿದರು.