ಆಧುನಿಕ ಮಾದರಿ ವಾಚನಾಲಯ ನಿರ್ಮಾಣ : ಸ್ಪೀಕರ್ ಯು.ಟಿ.ಖಾದರ್ ಹೇಳಿಕೆ

ಸ್ಪೀಕರ್ ಯು.ಟಿ.ಖಾದರ್ ವಾಚನಾಲಯ ಕಟ್ಟಡಕ್ಕೆ ಶಿಲಾನ್ಯಾಸಗೈದರು.
ಸ್ಪೀಕರ್ ಯು.ಟಿ.ಖಾದರ್ ವಾಚನಾಲಯ ಕಟ್ಟಡಕ್ಕೆ ಶಿಲಾನ್ಯಾಸಗೈದರು.
Published on

ಉಳ್ಳಾಲ: ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ರಾಜ್ಯದಲ್ಲಿ ಮಾದರಿ ಶಿಕ್ಷಣ ಸಂಸ್ಥೆಯಾಗಿದ್ದು ಈ ಹಿನ್ನೆಲೆ ಆಧುನಿಕ ಮಾದರಿ ವಾಚನಾಲಯ ಸ್ಥಾಪಿಸಿ ಶಾಲಾ ಅವಧಿಯ ಬಳಿಕ ಸಾರ್ವಜನಿಕರಿಗೂ ಅವಕಾಶ ನೀಡಲಾಗುವುದು ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.

ಮೊಂಟೆಪದವು ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ವಾಚನಾಲಯ ಕಟ್ಟಡಕ್ಕೆ ಶಿಲಾನ್ಯಾಸಗೈದು ಮಾತನಾಡಿದ ಅವರು, ಶಾಲೆಯಲ್ಲಿ ಎರಡು ವಿಜ್ಞಾನ ಪ್ರಯೋಗಾಲಯಕ್ಕೆ ಬೇಡಿಕೆ ಇದ್ದು, ವಿವಿಧ ಹಂತಗಳಲ್ಲಿ ಕಾಮಗಾರಿ ನಡೆಯಲಿದೆ. ವಿದ್ಯಾರ್ಥಿಗಳು ಅತ್ಯುತ್ತಮ ಶಿಕ್ಷಣ ಪಡೆದು ದೊಡ್ಡ ಸ್ಥಾನಕ್ಕೆ ಹೋಗಲು ಪ್ರಯತ್ನಿಸಬೇಕು ಎಂದರು.

ನರಿಂಗಾನ ಗ್ರಾಪಂ ಅಧ್ಯಕ್ಷ ನವಾಝ್ ನರಿಂಗಾನ, ಪ್ರೌಢಶಾಲಾ ವಿಭಾಗ ಅಧ್ಯಕ್ಷ ಮುರಳೀಧರ ಶೆಟ್ಟಿ ಮೋರ್ಲ, ಪ್ರಾಥಮಿಕ ವಿಭಾಗದ ಅಧ್ಯಕ್ಷ ಹನೀಫ್, ಗ್ರಾಪಂ ಕಾರ್ಯದರ್ಶಿ ನಳಿನಿ, ಪಪೂ ಕಾಲೇಜಿನ ಪ್ರಾಂಶುಪಾಲ ಸುರೇಶ್ ಎಂ.ಕೆ., ಪ್ರೌಢಶಾಲಾ ವಿಭಾಗ ಉಪ ಪ್ರಾಂಶುಪಾಲೆ ಮಂಜುಳಾ, ಗ್ರಾಪಂ ಸದಸ್ಯರಾದ ರಹ್ಮಾನ್ ಚಂದಹಿತ್ಲು, ಸಲೀಂ, ಫಯಾಝ್, ಮಂಗಳೂರು ತಾಪಂ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು, ಪ್ರಮುಖರಾದ ಹನೀಫ್ ಕಡಬ, ಸಮೀರ್ ಪಜೀರ್, ಅಬ್ಬಾಸ್, ಮಜೀದ್, ಸಿದ್ದೀಕ್, ಬಾಳೆಪುಣಿ ಗ್ರಾಪಂ ಸದಸ್ಯ ಆಸಿಫ್ ಉಪಸ್ಥಿತರಿದ್ದರು. ಅಬ್ದುಲ್ ಜಲೀಲ್ ಮೋಂಟುಗೋಳಿ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net