ರೆಂಜಾಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಶಂಕುಸ್ಥಾಪನೆಗೈದರು. ಸ್ಥಳೀಯ ಮಸೀದಿಯ ಖತೀಬ್ ತಾಜುದ್ದೀನ್ ರಝಾ ಅಮ್ಜದಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಹೇಮಾವತಿ, ಸದಸ್ಯರಾದ ರವೂಫ್ ಇನ್ನಿತರರು ಉಪಸ್ಥಿತರಿದ್ದರು.
ಉಳ್ಳಾಲ: ಯಾವುದೇ ಆಧುನಿಕ ತಂತ್ರಜ್ಞಾನಗಳಿಲ್ಲದ ಕಾಲದಲ್ಲಿ ನಿರ್ಮಿಸಲಾದ ಸೇತುವೆ 51 ವರ್ಷಗಳ ಕಾಲ ಬಾಳಿಕೆ ಬಂದಿದೆ. ಹೀಗಿರುವಾಗ ಇಂದಿನ ದಿನಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳು ಲಭ್ಯವಿರುವುದರಿಂದ ಕನಿಷ್ಠ 50 ವರ್ಷಗಳ ಬಾಳಿಕೆಯ ಕಾಮಗಾರಿ ನಡೆಯಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಬೆಲ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆಂಜಾಡಿ ಮುಖ್ಯರಸ್ತೆಯಲ್ಲಿರುವ ರಾಜಕಾಲುವೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಾಣಗೊಳ್ಳಲಿರುವ ಹೊಸ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.