

ಗುರುಪುರ: ಉತ್ತಮ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ 2023-24ನೇ ಸಾಲಿನ ಪ್ರತಿಷ್ಠಿತ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದ ನೀರುಮಾರ್ಗ ಗ್ರಾಮ ಪಂಚಾಯಿತಿಗೆ ಬೆಂಗಳೂರಿನಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಲಾಯಿತು.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರಿಂದ ನೀರುಮಾರ್ಗ ಪಂಚಾಯಿತಿ ಅಧ್ಯಕ್ಷ ಶ್ರೀಧರ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬೂಬಕ್ಕರ್ ಪ್ರಶಸ್ತಿ ಸ್ವೀಕರಿಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತ ಡಾ.ಅರುಣ್‌ದತ್ತಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಸಮೀರ್ ಶುಕ್ಲಾ ಮತ್ತಿತರರು ಉಪಸ್ಥಿತರಿದ್ದರು. ಪ್ರಶಸ್ತಿಯು 5 ಲಕ್ಷ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ.