ವಿದ್ಯಾರ್ಥಿಗಳ ತಾರ್ಕಿಕ ಚಿಂತನೆಗೆ ಸಹಕಾರಿ

ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಡೆಯಿತು. ರೋಹಿಣಿ, ಉಷಾಲಾಕ್ಷಿ, ಕಮಲಾಕ್ಷ, ದಾಮೋದರ, ನವೀನ್, ಕೇಶವ ಉಪಸ್ಥಿತರಿದ್ದರು.
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಡೆಯಿತು. ರೋಹಿಣಿ, ಉಷಾಲಾಕ್ಷಿ, ಕಮಲಾಕ್ಷ, ದಾಮೋದರ, ನವೀನ್, ಕೇಶವ ಉಪಸ್ಥಿತರಿದ್ದರು.
Published on
ಬಂಟ್ವಾಳ: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವಿಜ್ಞಾನದ ಕುರಿತು ಆಸಕ್ತಿ ಅಭಿವೃದ್ಧಿಪಡಿಸಲು, ಪ್ರಾಯೋಗಿಕಾತ್ಮಕ ಚಿಂತನೆ ಬೆಳೆಸುವುದು, ಮೂಢನಂಬಿಕೆಗಳನ್ನು ಹೋಗಲಾಡಿಸಿ ವೈಜ್ಞಾನಿಕ ಚಿಂತನೆ ಮತ್ತು ಸಮಸ್ಯೆಗಳನ್ನು ಬಗೆಹರಿಸುವ ಸಾಮರ್ಥ್ಯ ಬೆಳೆಸುವ ಸಲುವಾಗಿ ವಿಜ್ಞಾನದ ದಿನಾಚರಣೆ ಮೂಲಕ ವಿದ್ಯಾರ್ಥಿಗಳಲ್ಲಿ ತಾರ್ಕಿಕ ಚಿಂತನೆ ಬೆಳೆಯಲು ಸಹಾಯವಾಗುತ್ತದೆ ಎಂದು ಬಂಟ್ವಾಳ ಸಮೂಹ ಸಂಪನ್ಮೂಲ ಕೇಂದ್ರದ ಐಆರ್‌ಟಿ ಸುರೇಖಾ ಹೇಳಿದರು.
ತಾಲೂಕಿನ ನರಿಕೊಂಬು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಉದ್ಘಾಟಿಸಿ ವತನಾಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಅಧ್ಯಕ್ಷತೆ ವಹಿಸಿದ್ದರು. ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ರಂಜಿತ್, ಕೃತಿಕ್ ತಾವು ತಯಾರಿಸಿದ ಡ್ರೋನ್ ಹಾರಾಟ ಪ್ರದರ್ಶಿಸಿದರು.
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಅಟಲ್ ಟಿಂಕರಿಂಗ್ ಲ್ಯಾಬ್ ಸಂಯೋಜಕಿ ರೋಹಿಣಿ, ಶಾಲಾ ತಾಯಂದಿರ ಸಮಿತಿ ಅಧ್ಯಕ್ಷೆ ಉಷಾಲಾಕ್ಷಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಕಮಲಾಕ್ಷ, ದಾಮೋದರ, ನವೀನ್, ಕೇಶವ, ದಿವ್ಯಾ, ಪ್ರಿಯಾ, ಬಿ.ಸಿ.ರೋಡ್ ಕಾರ್ಮೆಲ್ ಶಾಲಾ ಶಿಕ್ಷಕ ರೋಷನ್ ಉಪಸ್ಥಿತರಿದ್ದರು.
ಬಂಟ್ವಾಳ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘ ಅಧ್ಯಕ್ಷ ಜಯರಾಮ್, ವಿಜಯವಾಣಿ ಪತ್ರಿಕಾ ಕಚೇರಿ ಸಿಬ್ಬಂದಿಗಳಾದ ಸೂರಜ್, ಗಣೇಶ್ ಬೋಳಾರ, ಗಿರೀಶ್, ಪಾಲಕರು ಭೇಟಿ ನೀಡಿ ಪ್ರೋತ್ಸಾಹಿಸಿದರು. ಪ್ರಭಾರ ಮುಖ್ಯಶಿಕ್ಷಕಿ ಸುಜಾತಾ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಶೋಭಾ ವಂದಿಸಿದರು. ಶಿಕ್ಷಕಿ ದೀಪಿಕಾ ಶೆಟ್ಟಿ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net