ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಗೌರವ

ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ರೇಣುಕಾ ಪ್ರಸಾದ್ ಕುರುಂಜಿ ಅವರನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಗೌರವಿಸಿದರು.
ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ರೇಣುಕಾ ಪ್ರಸಾದ್ ಕುರುಂಜಿ ಅವರನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಗೌರವಿಸಿದರು.
Published on

ಬೆಳ್ತಂಗಡಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷ, ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ರೇಣುಕಾ ಪ್ರಸಾದ್ ಕುರುಂಜಿ, ಪದಾಧಿಕಾರಿಗಳನ್ನು ದೇವಸ್ಥಾನದ ಸನ್ನಿಧಾನದಲ್ಲಿ ಗೌರವಿಸಲಾಯಿತು.

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಎಚ್.ಪದ್ಮಗೌಡ, ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಜತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ದರ್ಣಪ್ಪ ಗೌಡ ಬಾನಡ್ಕ, ಕೋಶಾಧಿಕಾರಿ ಯುವರಾಜ್ ಅನಾರು, ಬೆಳ್ತಂಗಡಿ ಪಪಂ ಅಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿಯ ಹಿರಿಯ ವಕೀಲ ಗೋಪಾಲಕೃಷ್ಣ ಗುಲ್ಲೋಡಿ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವನಾಲು, ಕಲ್ಲೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಪಾಧ್ಯಕ್ಷ ಸುನೀಲ್ ಅನಾವು, ಬಾರಿಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಪ್ರಸನ್ನ ಗೌಡ, ತಾಲೂಕು ಸಂಘದ ನಿರ್ದೇಶಕರಾದ ಮಾಧವ ಗೌಡ ವಿ.ಜಿ., ವಸಂತಗೌಡ ನಡ, ದಿನೇಶ್ ಗೌಡ ಕೊಯ್ಯೂರು, ಪುರಂದರ ಗೌಡ, ಯುವ ವೇದಿಕೆ ಕಾರ್ಯದರ್ಶಿ ಸುರೇಶ್ ಗೌಡ, ತೀಕ್ಷಿತ್ ಗೌಡ, ನಿತಿನ್ ಕಲ್ಮಂಜ, ರಂಜಿತ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net