ಸಾಧಕರನ್ನು ಗೌರವಿಸುವುದು ಇತರರಿಗೆ ಪ್ರೇರಣೆ

ಹೊಸ ಅಂಗಣದ ದಶಮಾನೋತ್ಸವ ಸಂಭ್ರಮ
ಹೊಸ ಅಂಗಣದ ದಶಮಾನೋತ್ಸವ ಸಂಭ್ರಮವನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಉದ್ಘಾಟಿಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಮತ್ತಿತರರಿದ್ದರು.
ಹೊಸ ಅಂಗಣದ ದಶಮಾನೋತ್ಸವ ಸಂಭ್ರಮವನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಉದ್ಘಾಟಿಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಮತ್ತಿತರರಿದ್ದರು.
Published on: 

ಮೂಲ್ಕಿ: ಸರ್ಕಾರಿ ಸೇವಾ ನಿವೃತ್ತಿಯ ಬಳಿಕ ಸಾಹಿತ್ಯ ಮತ್ತು ಪತ್ರಿಕೆಯಲ್ಲಿ ತೊಡಗಿಸಿಕೊಂಡು ಪ್ರತೀ ತಿಂಗಳು ಎಲೆಮರೆಯ ಸಾಧಕರನ್ನು ಗೌರವಿಸಿ ಸಮಾಜಕ್ಕೆ ಪರಿಚಯಿಸುವ ಜತೆಗೆ ಸಂಸ್ಕೃತಿ ಸಂಸ್ಕಾರಗಳ ತಿಳುವಳಿಕೆಯನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ ದಶಮಾನೋತ್ಸವ ಸಂಭ್ರಮ ಆಚರಿಸುತ್ತಿರುವುದು ಯುವ ಸಾಹಿತಿಗಳಿಗೆ ಪ್ರೇರಣೆಯಾಗಿದೆ ಎಂದು ಶಾಸಕ ಉಮಾನಾಥ ಎ.ಕೋಟ್ಯಾನ್ ಹೇಳಿದರು.

ಮೂಲ್ಕಿ ಶ್ರೀಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ಅನ್ನಪೂರ್ಣೇಶ್ವರಿ ಸಭಾಂಗಣದಲ್ಲಿ ಭಾನುವಾರ ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್ ಅವರ ಹೊಸ ಅಂಗಣದ ದಶಮಾನೋತ್ಸವ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಿ ಹರಿಶ್ಚಂದ್ರ ಪಿ.ಸಾಲ್ಯಾನ್ ರಚಿಸಿದ ತುಳುನಾಡ ಮದುವೆ ಕೃತಿಯನ್ನು ಬಿಡುಗಡೆಗೊಳಿಸಿದರು. ಕಸಾಪ ಪೂರ್ವಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಹೊಸ ಅಂಗಣದ ದಶಮಾನೋತ್ಸವ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿದರು. ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾರ್ಡ್, ಕಸಾಪ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಬಿಲ್ಲವ ಮಹಾಮಂಡಲ ಅಧ್ಯಕ್ಷ ಸೂರ್ಯಕಾಂತ ಜೆ.ಸುವರ್ಣ, ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ವಕೀಲ ಭಾಸ್ಕರ ಹೆಗ್ಡೆ, ಶಾಂಭವಿ ಜೆಸಿಐ ಟ್ರಸ್ಟ್ ಮಾಜಿ ಅಧ್ಯಕ್ಷ ಮೊಹಮ್ಮದ್ ಹಬೀಬುಲ್ಲಾ, ಕಾಂತು ಸೇವೆಗಾರ ಧರ್ಮಚಾವಡಿ ಅಧ್ಯಕ್ಷ ವಾಸು ಪೂಜಾರಿ, ವಿಜಯಾ ಹರಿಶ್ಚಂದ್ರ ಸಾಲ್ಯಾನ್, ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಸುವರ್ಣ ಮುಖ್ಯ ಅತಿಥಿಗಳಾಗಿದ್ದರು.

ಸಮಾರೋಪ ಸಮಾರಂಭ

ಸಮಾರೋಪ ಸಮಾರಂಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಎಸ್‌ಎನ್‌ಜಿ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಹರೀಂದ್ರ ಸುವರ್ಣ, ಮೂಲ್ಕಿ ನಪಂ ಮಾಜಿ ಅಧ್ಯಕ್ಷ ಸತೀಶ್ ಅಂಚನ್, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್‌ದಾಸ್ ಹೆಜ್ಮಾಡಿ, ಕನ್ನಂಗಾರ್ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಶೀನ ಪೂಜಾರಿ, ಉದ್ಯಮಿಗಳಾದ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ ಮತ್ತು ಪ್ರಭಾಕರ ಪೂಜಾರಿ, ಬಪ್ಪನಾಡು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುನೀಲ್ ಆಳ್ವ ಮುಖ್ಯ ಅತಿಥಿಗಳಾಗಿದ್ದರು. ದಿನೇಶ್ ಕೆ.ಶೆಟ್ಟಿ ಮತ್ತು ವೈ.ಎನ್.ಸಾಲ್ಯಾನ್ ಸ್ವಾಗತಿಸಿದರು. ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್ ಪ್ರಸ್ತಾವಿಸಿದರು. ಚರಣ್, ದಿನೇಶ್ ಕೊಲ್ನಾಡು ಕಾರ್ಯಕ್ರಮ ನಿರ್ವಹಿಸಿದರು.

ರಾಜ್ಯ ಪ್ರಶಸ್ತಿ ಪ್ರದಾನ

ಪುನೀತ್‌ಕೃಷ್ಣ, ಭಾನುಮತಿ ಶೆಟ್ಟಿ ಕಕ್ವಗುತ್ತು, ಸರೋಜಿನಿ ಸುವರ್ಣ, ಸುರೇಂದ್ರ ಜಿ.ಶೆಣೈ, ಎ.ಕೃಷ್ಣಾನಂದ ಶೆಟ್ಟಿ, ಐಕಳ, ಜೈಕೃಷ್ಣ ಕೋಟ್ಯಾನ್, ಜೋನ್ ಕ್ವಾಡ್ರಸ್, ವಾಸು ಪೂಜಾರಿ ಚಿತ್ರಾಪು, ದಿನೇಶ್ ಕೆ.ಶೆಟ್ಟಿ ಅವರಿಗೆ ಹೊಸ ಅಂಗಣದ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಾನಾ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net